ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಅ.5 ಮತ್ತು 6ರಂದು ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಮಾರ್ಗದ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಹಾಗೂ ಕೆ.ವಿ. ಮಾರ್ಗ ಮುಕ್ತತೆ ನೀಡುವುದರಿಂದ ನಗರ ಉಪವಿಭಾಗ-1ರ ವ್ಯಾಪ್ತಿಗೊಳಪಡುವ ಶಿವಬಸವನಗರ, ಇಂದಿರಾಗಾಂಧಿ ಬಡಾವಣೆ, ವೀರಭದ್ರೇಶ್ವರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಪ್ರದೇಶದ ಹಾಗೂ ಸುತ್ತಮುತ್ತಲ ಪ್ರದೇಶದ ನಾಗರೀಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post