ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಗಾಂಧಿ ಬಜಾರ್‌ನ ರಾಮಣ್ಣಶ್ರೇಷ್ಠಿ ಪಾರ್ಕ್ ಬಳಿ ಹೊಸ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.5ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಅನವೇರಪ್ಪ ಕೇರಿ, ಯಾಲಕಪ್ಪ ಕೇರಿ, ಬೇಡರ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಫೆ.6ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಫೆ.6ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also read: ಸೊಸೈಟಿ ಬೆಳೆಯಲು ಆರ್ಥಿಕ ಶಕ್ತಿ ಜೊತೆಗೆ ಯುವ ಶಕ್ತಿ ಬಳಸಿಕೊಳ್ಳಿ | ಸಚಿವ ಮಧು ಬಂಗಾರಪ್ಪ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್‌ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post