ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಹೊಳಲೂರಿನ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ 11ಕೆ.ವಿ ಎ.ಬಿ.ಸಿ. ಕೇಬಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಮಾರ್ಚ್ 1ರ ಸೋಮವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಈ ಪ್ರದೇಶದ ವ್ಯಾಪ್ತಿಗೊಳಪಡುವ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಹಾಗೂ ಸುತ್ತಮುತ್ತಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾ&ನಿ ಗಾ.ಉ.ವಿ.ದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















