ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಾದ್ಯಂತ ಮಾರ್ಚ್ 26 ಹಾಗೂ 27ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಹಿತಿ ಪ್ರಕಟಿಸಿದ್ದು, ಗಾಜನೂರು ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜಾಗುವ ಮತ್ತು ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಈ ಹಿನ್ನೆಲೆ ಎರಡು ದಿನ ಶಿವಮೊಗ್ಗ ನಗರದಲ್ಲಿ ನೀರು ಸರಬರಾಜು ವ್ಯತ್ಯಯವಾಗಲಿದೆ ಎಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.
Also read: ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post