ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ರಾಮನಗರ ಜಿಲ್ಲಾ ಮುಖ್ಯರಸ್ತೆ ಸರಪಳಿ ಕಿ.ಮೀ.1.35 ರಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಮಾರ್ಗದ ವಾಹನ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ.
2023ರ ಜನವರಿ 20ರಿಂದ ಜೂನ್ 30ರವರೆಗೂ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗವಾದ ಪಕ್ಕದಲ್ಲಿರುವ ಇತ್ತೀಚೆಗೆ ಹೊಸದಾಗಿ ನಿರ್ಮಿಸಲಾಗಿರುವ ಸೇತುವೆಯ ಮೇಲೆ ಮಾತ್ರ ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988 ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221(ಎ)(2) ಮತ್ತು (5) ರನ್ವಯ ವಾಹನಗಳನ್ನು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಿದ್ದಾರೆ.
Also read: ಮೈಸೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆ ಚುರುಕು: ಪಾಲಿಕೆ ಸದಸ್ಯ ರಾಮಪ್ರಸಾದ್ ಭಾಗಿ












Discussion about this post