ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುಗಾದಿ ಹಾಗೂ ರಂಜಾನ್ ಹಬ್ಬದ #Ugadi and Ramzan ಹಿನ್ನೆಲೆಯಲ್ಲಿ ಏಪ್ರಿಲ್ 1ರ ಮಂಗಳವಾರದAದು ಪ್ರವಾಸಿಗರ ಅನುಕೂಲಕ್ಕಾಗಿ ತ್ಯಾವರೆಕೊಪ್ಪ ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
ಹುಲಿ-ಸಿಂಹಧಾಮ, #Tyavarekoppa Tiger and Lion Safari ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಎಪ್ರಿಲ್ 1ರ ಮಂಗಳವಾರದAದು ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
Also read: ಹುಬ್ಬಳ್ಳಿ | ನೈಋತ್ಯ ರೈಲ್ವೆಯ 5 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ
ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿ ಏ.1 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಇದರ ಸದುಪಯೋಗ ಪಡೆಯಬೇಕೆಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post