No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿಯೋಜಿತ ಸ್ಮಾರ್ಟ್‌ಸಿಟಿ ಕಾಮಗಾರಿಗಳನ್ನು ನಿರ್ಲಕ್ಷ್ಯ ವಹಿಸದಂತೆ ಪೂರ್ಣಗೊಳಿಸಲು ಸೂಚನೆ

ಸ್ಮಾರ್ಟ್‌ಸಿಟಿ ಯೋಜನೆ ಆಡಳಿತ ಕಚೇರಿಯ ಸಭಾಂಗಣದಲ್ಲಿ ಸಚಿವ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

kalpa News by kalpa News
January 10, 2022
in ಶಿವಮೊಗ್ಗ
0
ನಿಯೋಜಿತ ಸ್ಮಾರ್ಟ್‌ಸಿಟಿ ಕಾಮಗಾರಿಗಳನ್ನು ನಿರ್ಲಕ್ಷ್ಯ ವಹಿಸದಂತೆ ಪೂರ್ಣಗೊಳಿಸಲು ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಈಗಾಗಲೇ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಅವರು ಇಂದು ಸ್ಮಾರ್ಟ್‌ಸಿಟಿ ಯೋಜನೆ ಆಡಳಿತ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರ ಪ್ರದೇಶದ ಕೆಲವೆಡೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ಸಾರ್ವಜನಿಕರಿಗೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಹಾಗೂ ಈ ಪೈಪ್‌ಲೈನ್‌ಗೆ ಕಲುಶಿತ ನೀರು ಸೇರುವ ಆತಂಕವಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೆಲಸ ನಡೆಯುವ ಸ್ಥಳಗಳಲ್ಲಿದ್ದು, ಕಾಮಗಾರಿಗಳು ನಿಯಮಾನುಸಾರ ನಡೆಯುವಲ್ಲಿ ಕ್ರಮ ಕೈಗೊಳ್ಳುವಂತೆ ಹಾಗೂ ನಿಯೋಜಿತ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸದಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೊರೋನ ಸೋಂಕು ಇತ್ತೀಚಿನ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಲಸಿಕೆ ನೀಡುವ ಹಾಗೂ ಅವರ ನೆಮ್ಮದಿಯ ಬದುಕಿಗೆ ಭರವಸೆ ನೀಡುವಲ್ಲಿ ಅಧಿಕಾರಿಗಳು ಗಮನಹರಿಸುವಂತೆ ಅವರು ಸೂಚಿಸಿದರು.

ಪೂರ್ಣಗೊಂಡಿರುವ 28 ಕಾಮಗಾರಿಗಳ ಪ್ರದೇಶದಲ್ಲಿ ಇನ್ನೂ ಯಾವುದೇ ಕೆಲಸಗಳು ಬಾಕಿ ಇಲ್ಲದಂತೆ ನೋಡಿಕೊಳ್ಳಬೇಕು. ಇದೇ ಜನವರಿ 16ರ ನಂತರ 3 ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಈ ಸಂದರ್ಭದಲ್ಲಿ ಇನ್ನೂ ಸಣ್ಣಪುಟ್ಟ ಯಾವುದೇ ಕೆಲಸ ಬಾಕಿ ಇರುವ ಬಗ್ಗೆ ಮಾಹಿತಿ ನೀಡಿದಲ್ಲಿ ಅಂತಹ ಅಧಿಕಾರಿಯ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ಎಚ್ಚರಿಸಿರು.

ಜನವರಿ 19 ಮತ್ತು 20ರಂದು ಪ್ರಸ್ತುತ ನಗರದ ಹಲವೆಡೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಖುದ್ದು ಪರಿಶೀಲಿಸಲಾಗುವುದು ಎಂದ ಅವರು, ಈಗಾಗಲೇ ಕಾಮಗಾರಿ ಪೂರ್ಣಗೊಂಡಿರುವ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವಂತೆಯೂ ಅವರು ಸೂಚಿಸಿದರು.

ಈಗಾಗಲೇ ಕುಡಿಯುವ ನೀರನ್ನು ದಿನದ ಪೂರ್ಣ ಅವಧಿಯಲ್ಲೂ ಒದಗಿಸುವ ಯೋಜನೆಯಡಿ ನಗರದ ಕೆಲವು ಭಾಗಗಳಲ್ಲಿ ಪ್ರಾಯೋಗಿಕವಾಗಿ ನೀಡಲಾಗುತ್ತಿರುವ ರಸೀದಿಯಲ್ಲಿ ಭಾರೀ ಪ್ರಮಾಣದಲ್ಲಿ ದರ ನಿಗಧಿಪಡಿಸಿರುವುದಕ್ಕೆ ಜನರಲ್ಲಿ ತೀವ್ರ ವಿರೋಧವಿದೆ. ಇದಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಸಿಬ್ಬಂಧಿಗಳು ಪ್ರತಿ ಮನೆಗೆ ಭೇಟಿ ನೀಡಿ, ಜನರಲ್ಲಿ ವಾಸ್ತವದ ಮನವರಿಕೆ ಮಾಡಿಕೊಡುವುದರ ಜೊತೆಗೆ ನೀರು ಬಳಕೆಯ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಂಡು ನಿಗಧಿಪಡಿಸದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸದಿರುವ ಗುತ್ತಿಗೆದಾರರಿಗೆ ಸೂಕ್ತ ಎಚ್ಚರಿಕೆ ನೀಡಿ, ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಬೇಕು. ತಪ್ಪಿದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಬೇಕು. ಅಲ್ಲದೇ ಅವರಿಗೆ ಬಾಕಿ ಹಣ ಪಾವತಿಸದಂತೆ ಕ್ರಮ ವಹಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಈವರೆಗೆ ಒಟ್ಟು 590.79ಕೋಟಿ ರೂ. ಅನುದಾನ ಮಂಜೂರಾಗಿದ್ದು, 473.74ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. 983.42ಲಕ್ಷ ಅಂದಾಜಿನಲ್ಲಿ 55 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಆಪೈಕಿ 28 ಕಾಮಗಾರಿಗಳು ಪೂರ್ಣಗೊಂಡಿವೆ. 25 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಉಳಿದಂತೆ 2 ಕಾಮಗಾರಿಗಳು ಯೋಜನಾ ಹಂತದಲ್ಲಿವೆ ಎಂದರು.

ಕಳೆದ 2 ವರ್ಷಗಳಲ್ಲಿ ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಕಾರ್ಮಿಕರ ಹಾಗೂ ಮೂಲಸಾಮಗ್ರಿಗಳ ಕೊರತೆಯಿಂದ ಪ್ರಗತಿ ಕುಂಠಿತವಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರವೂ ಯೋಜನೆಯ ಕಾಲಮಿತಿಯನ್ನು 2023ರ ಡಿಸೆಂಬರ್ ಮಾಹೆಯವರೆಗೆ ವಿಸ್ತರಿಸಿದೆ. ಆದಾಗ್ಯೂ 2022ರ ಡಿಸೆಂಬರ್ ಮಾಹೆಯ ಅಂತ್ಯದೊಳಗಾಗಿ ಶೇ.೯೫ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದರು.

ಸಭೆಯಲ್ಲಿ ಮಹಾನಗರಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ, ಜ್ಞಾನೇಶ್ವರ್, ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga NewsSmartcityಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪಸ್ಮಾರ್ಟ್‌ಸಿಟಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಕಲ ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ

Next Post

ನವದೆಹಲಿಯಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

kalpa News

kalpa News

Next Post
ನವದೆಹಲಿಯಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

ನವದೆಹಲಿಯಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL