No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಮಾಜಿ ಡಿಸಿಎಂ ಮುಂದಿನ ನಡೆಯೇನು? ಮತ್ತೆ ಬ್ರಿಗೇಡ್ ಸ್ಥಾಪನೆಯಾಗುತ್ತಾ?

kalpa News by kalpa News
October 15, 2024
in ಶಿವಮೊಗ್ಗ
0
ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಕ್ಟೋಬರ್ 20ರಂದು ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಉತ್ತರ ಕರ್ನಾಟಕದ ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರ ಚಿಂತನ–ಮಂಥನ ಸಮಾವೇಶ ನಡೆಸಲು ಆ ಭಾಗದ ಸಾಧು ಸಂತರು ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಪಕ್ಷಾತೀತ, ಜಾತ್ಯತೀತವಾಗಿರುತ್ತದೆ. ನಾಯಕತ್ವವನ್ನು ಆ ಭಾಗದ ಸಾಧು ಸಂತರೇ ವಹಿಸಲಿದ್ದಾರೆ. ಇಲ್ಲಿ ಈ ಬ್ರಿಗೇಡ್ ಗೆ ಯಾವ ಹೆಸರು ಘೋಷಣೆ ಮಾಡಬೇಕು. ಇದರ ಮುಂದಿನ ಕಾರ್ಯಕ್ರಮಗಳೇನು ಎಂದು ಆ ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು ಎಂದರು.
ಈಗಾಗಲೇ, ರಾಜ್ಯದ ಎಲ್ಲಾ ಭಾಗಗಳಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿಂದುಳಿದ ವರ್ಗದ ಸಂಘಟನೆ ಅಗತ್ಯ ಎಂಬುದನ್ನು ಜನ ಮನಗಂಡಿದ್ದಾರೆ. ಅನೇಕರು ಈಗಾಗಲೇ ನಾವು ಬರುತ್ತೇವೆ ಎಂದು ಸಂಪರ್ಕಿಸುತ್ತಿದ್ದಾರೆ. ಆದರೆ, ಅಲ್ಲಿ ಕೇವಲ ಎರಡೂವರೆ ಸಾವಿರ ಜನರಿಗೆ ಮಾತ್ರ ಅವಕಾಶವಿದ್ದು, ಪ್ರಮುಖರು ಮಾತ್ರ ಬರಲು ಅವಕಾಶವಿದ್ದು, ಹಿಂದುಳಿದ ವರ್ಗದ ನಾಯಕರು ಬರುವ ಮುನ್ನ ವ್ಯವಸ್ಥೆಯ ದೃಷ್ಟಿಯಿಂದ ಪೋನ್ ಮೂಲಕ ತಮ್ಮನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

Also read: ಅ.24-26 | ಉಡುಪಿ ಶ್ರೀಕೃಷ್ಣ ಮಠದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಆಗಮಿಸಿದವರ ಸಲಹೆಯನ್ನೂ ಕೂಡ ತೆಗೆದುಕೊಳ್ಳುತ್ತೇವೆ. ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದ್ದು, ಹಿಂದೆ ನಾನು ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿದಾಗ ಕೂಡ ಅದೇ ರೀತಿ ಬೆಂಬಲ ವ್ಯಕ್ತವಾಗಿತ್ತು. ಪಕ್ಷದ ಹಿರಿಯರ ಮಾತಿಗೆ ಬೆಲೆ ಕೊಟ್ಟು ಅದನ್ನು ನಿಲ್ಲಿಸಿದ್ದೆ. ಆದರೆ, ನಾನು ತಪ್ಪು ಮಾಡಿದೆ ಎಂದು ಈಗ ಅನಿಸುತ್ತಿದೆ ಎಂದರು.

ಕೇಂದ್ರದಲ್ಲಿ ಜಂಟಿ ಸಮಿತಿ ಅಡಿಯಲ್ಲಿ ವಕ್ಪ್ ಆಸ್ತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಅನ್ವರ್ ಮಾಣಿಪ್ಪಾಡಿ ನೇತೃತ್ವದಲ್ಲಿ ವಕ್ಪ್ ಆಸ್ತಿಯ ಬಗ್ಗೆ ಅವರು ಮಾಹಿತಿ ಸಂಗ್ರಹಿಸಿ ಬಡ ಮುಸ್ಲಿಂ ವ್ಯಕ್ತಿಗಳಿಗೆ ಸೇರಬೇಕಾದ ಕೋಟ್ಯಂತರ ರೂ. ಬೆಲೆ ಬಾಳುವ ಆಸ್ತಿ ಕೆಲವೇ ಕೆಲವು ಮುಸ್ಲಿಂ ಮುಖಂಡರ ಪಾಲಾಗಿದೆ ಎಂದು ತಮ್ಮ ವರದಿಯಲ್ಲಿ ತಿಳಿಸಿದ್ದರು. ಆಗ ಕಾಂಗ್ರೆಸ್ ಮುಖಂಡರು ಮತ್ತು ಆಸ್ತಿ ಲೂಟಿ ಮಾಡಿದ ಪ್ರಬಲ ನಾಯಕರು ಬಲವಾಗಿ ವಿರೋಧಿಸಿದ್ದರು. ಮತ್ತು ಅನ್ವರ್ ಮಾಣಿಪ್ಪಾಡಿ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಪರಿಷತ್ ನಲ್ಲಿ ಹಲವು ಬಾರಿ ಈ ವರದಿ ಬಹಿರಂಗಪಡಿಸಲು ಒತ್ತಾಯಿಸಿದ್ದೆ. ಆಗಿನ ಸಭಾಪತಿಗಳಾದ ಡಿ.ಹೆಚ್. ಶಂಕರಮೂರ್ತಿ ಅವರು ತಮಗೂ ಜೀವ ಬೆದರಿಕೆ ಇದ್ದರೂ ಲೆಕ್ಕಿಸದೇ ಆ ವರದಿಯನ್ನು ಟೇಬಲ್ ಗೆ ತಂದಿದ್ದರು. ಈಗ ಅದರು ಕೇಂದ್ರದ ಸಂಸದೀಯ ಮಂಡಳಿಯಲ್ಲಿ ಕೂಡ ಚರ್ಚೆಗೆ ಬಂದಿದೆ. ಅದರಲ್ಲಿ ಮಲ್ಲಿಕಾರ್ಜುನ ಖರ್ಗೆ, ರೆಹಮಾನ್ ಖಾನ್ ಮೊದಲಾದ ನಾಯಕರ ಹೆಸರೂ ಇದೆ. ಕಾಂಗ್ರೆಸ್ ಪಕ್ಷ ಬಡ ಮುಸ್ಲಿಮರ ಆಸ್ತಿ ರಕ್ಷಣೆಗಾಗಿ ಈ ವರದಿಗೆ ಅಡ್ಡಿಪಡಿಸಬಾರದು. ಡಿ.ಹೆಚ್. ಶಂಕರಮೂರ್ತಿ ಮತ್ತು ಅನ್ವರ್ ಮಾಣಿಪ್ಪಾಡಿ ಅವರಿಗೆ ಭದ್ರತೆ ಒದಗಿಸಬೇಕು ಎಂದರು.

ಸಾವಿರಾರು ಕೋಟಿ ಆಸ್ತಿ ಕೆಲವೇ ವ್ಯಕ್ತಿಗಳ ಪಾಲಾಗಲು ಬಿಡಬಾರದು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಈ ವರದಿ ಬಗ್ಗೆ ಗಮನಹರಿಸಲಿ ಎಂದರು.

https://kalpa.news/wp-content/uploads/2024/04/VID-20240426-WA0008.mp4

ಹುಬ್ಬಳ್ಳಿ ಗಲಭೆಗೆ #Hubli Violence ಸಂಬಂಧಿಸಿದಂತೆ ಮುಸಲ್ಮಾನರ ಮೇಲಿರುವ ಪ್ರಕರಣವನ್ನು ರಾಜ್ಯ ಸರ್ಕಾರ ರದ್ದು ಮಾಡಬಾರದಿತ್ತು. ಮುಸ್ಲಿಮರು ಅಂದಾಕ್ಷಣ ಅವರು ಏನೂ ಮಾಡಿದರೂ ಕ್ಷಮಿಸಬೇಕು ಎಂದರೆ ಹೇಗೆ? ಪೊಲೀಸ್ ಠಾಣೆಗೆ ನುಗ್ಗಿ ಕಲ್ಲು ತೂರಾಟ ನಡೆಸಿ ಪೊಲೀಸರ ಮೇಲೆಯೇ ದಂಗೆ ಎದ್ದ 155 ಗೂಂಡಾಗಳ ಮೇಲೆ ಹಾಕಿದ ಕೇಸ್ ರದ್ದು ಮಾಡಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಹೀಗೇ ಆದರೆ ರಾಜ್ಯ ಗೂಂಡಾ ರಾಜ್ಯವಾಗಲಿದ್ದು, ಬಾಂಗ್ಲಾ ದೇಶದ ಪರಿಸ್ಥಿತಿ ಬರುತ್ತದೆ ಎಂದರು.

ಮುಖ್ಯಮಂತ್ರಿಗಳು ಇತ್ತೀಚೆಗೆ ಭಾರಿ ದೈವಭಕ್ತರಾಗಿದ್ದಾರೆ. ಸಿದ್ಧರಾಮಯ್ಯನವರು ಇದೇ ಭಕ್ತಿಯನ್ನು ಮುಂದುವರೆಸಲಿ. ಈಗಲಾದರೂ ಅವರಿಗೆ ದೇವರ ಮೇಲೆ ಭಕ್ತಿ ಬಂದಿರುವುದು ನನಗೆ ಸಂತಸ ತಂದಿದೆ ಎಂದರು.

ದಲಿತರ ಚಾಂಪಿಯನ್ ಎಂದು ಹೇಳುವ ಅವರು 9 ವರ್ಷದ ಕೆಳಗೆ ಕಾಂತರಾಜ್ ವರದಿ ಜಾರಿಗೆ ತರಲು ನಾನು ಹಲವು ಬಾರಿ ಒತ್ತಾಯಿಸಿದ್ದರೂ ಇದುವರೆಗೂ ಜಾರಿಗೆ ತಂದಿಲ್ಲ. ಈಗ ಮುಡಾ ಹಗರಣ ಬಯಲಿಗೆ ಬಂದ ಮೇಲೆ ವರದಿ ಬಗ್ಗೆ ಮಾತನಾಡುತ್ತಿದ್ದಾರೆ. ಅ. 18ರಂದು ಜಾರಿ ಮಾಡಿಯೇ ಸಿದ್ದ ಎಂದವರು ಈಗ 25ಕ್ಕೆ ಮುಂದೂಡಿದ್ದಾರೆ. ಇದರಲ್ಲೇನೋ ಕುತಂತ್ರವಿದೆ ಎಂದರು.

ಬ್ರಿಗೇಡ್ ಸ್ಥಾಪನೆ ಹಿಂದೆ ರಾಜಕೀಯ ಉದ್ದೇಶವಿಲ್ಲ. ಅದು ರಾಜಕೀಯ ಸಂಘಟನೆಯೂ ಅಲ್ಲ, ಬ್ರಹ್ಮ ಬಂದರೂ ಇದನ್ನು ನಿಲ್ಲಿಸಲು ಸಾಧ್ಯವಿಲ್ಲ. ಸಾಧುಸಂತರೇ ಇದರ ನಾಯಕತ್ವ ವಹಿಸುತ್ತಾರೆ ಎಂದರು.

ಸಚಿವ ನಾಗೇಂದ್ರ ಅವರಿಗೆ ಜಾಮೀನು ದೊರೆತಾಕ್ಷಣ ಅವರು ನಿರಪರಾಧಿ ಎಂದಲ್ಲ. ಕೋರ್ಟ್ ನಿರ್ದೇಶನದ ಮೇರೆಗೆ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆ ಖಂಡಿತ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರ ಭಕ್ತರ ಬಳಗದ ಪ್ರಮುಖರಾದ ಇ. ವಿಶ್ವಾಸ್, ರಮೇಶ್ ಸರ್ಜಿಗಾರ, ಕುಬೇರಪ್ಪ, ಜಗದೀಶ್, ಮೋಹನ್ ಜಾಧವ್, ಶಂಕರ್ ನಾಯಕ್, ಬಾಲು, ಸುನಿಲ್ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                     

 

Tags: Hubli ViolenceK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹುಬ್ಬಳ್ಳಿ ಗಲಭೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.24-26 | ಉಡುಪಿ ಶ್ರೀಕೃಷ್ಣ ಮಠದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

Next Post

ಅ.19 | ಋಗ್ವೇದ ಘನ ಪಾರಾಯಣ ಸಮಾರೋಪ | ನಗರದಲ್ಲಿ ಬೃಹತ್ ಶೋಭಾಯಾತ್ರೆ | ಘನಪಾಠಿಗಳಿಗೆ ಸನ್ಮಾನ

kalpa News

kalpa News

Next Post
ಅ.19 | ಋಗ್ವೇದ ಘನ ಪಾರಾಯಣ ಸಮಾರೋಪ | ನಗರದಲ್ಲಿ ಬೃಹತ್ ಶೋಭಾಯಾತ್ರೆ | ಘನಪಾಠಿಗಳಿಗೆ ಸನ್ಮಾನ

ಅ.19 | ಋಗ್ವೇದ ಘನ ಪಾರಾಯಣ ಸಮಾರೋಪ | ನಗರದಲ್ಲಿ ಬೃಹತ್ ಶೋಭಾಯಾತ್ರೆ | ಘನಪಾಠಿಗಳಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL