ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಆಡಿಕೊಂಡಿದ್ದ 2 ವರ್ಷದ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಂದಮ್ಮ ಸಾವನ್ನಪ್ಪಿರುವ ಮನಕಲುಕುವ ಘಟನೆ ನಗರದ ಹೊರವಲಯದ ವಿರುಪಿನಕೊಪ್ಪದಲ್ಲಿ ನಡೆದಿದೆ.
ಮೃತ ಮಗುವನ್ನು ವಿನಯ್ (2) ಎಂದು ಗುರುತಿಸಲಾಗಿದೆ.
ವಿರುಪಿನಕೊಪ್ಪದಲ್ಲಿ ರಸ್ತೆ ಮೇಲೆ ಮಗು ತನ್ನ ಪಾಡಿಗೆ ಆಟವಾಡಿಕೊಂಡಿತ್ತು. ಈ ವೇಳೆ ಕೋಟೆಗಂಗೂರು ಕಡೆಯಿಂದ ಸಾಗರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರೊಂದು ಮಗುವಿಗೆ ಡಿಕ್ಕಿ ಹೊಡೆದಿದೆ.

ತಕ್ಷಣವೇ ಮಗುವನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಉಸಿರು ಚೆಲ್ಲಿದೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post