ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಭದ್ರಾವತಿ ತಾಲ್ಲೂಕು ಘಟಕದ ವತಿಯಿಂದ ರಾಜ್ಯ ರೈತ ಸಂಘದ ಸಂಸ್ಥಾಪಕರಾದ ಎನ್.ಡಿ.ಸುಂದರೇಶ್‍ರವರ 32ನೇ ವರ್ಷದ ಪುಣ್ಯ ಸ್ಮರಣೆ ಹಾಗೂ ರೈತರ ಜಾಗೃತಿ ಸಭೆಯನ್ನು ಡಿ.21ರ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ವರಿಷ್ಟ ಕೆ.ಟಿ. ಗಂಗಾಧರ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ರಿಸರ್ವ್ ಬ್ಯಾಂಕ್ ರೈತರ ಕೃಷಿಗೆ ಸಂಬಂಧಿಸಿದ ಉತ್ಪನ್ನಗಳ ಹೆಚ್ಚಳವಾಗಿರುವುದರಿಂದ ಅಡಮಾನ ಸಾಲವನ್ನು 1.60 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಳ ಮಾಡಿದೆ. ಆದರೆ ನಬಾರ್ಡ್ ಸಾಲದ ಮೀತಿಯನ್ನು ಶೇ.58ರಷ್ಟು ಕಡಿಮೆ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು.

Also read: ಶಿವಮೊಗ್ಗ | ತೀರ್ಥಹಳ್ಳಿಯಲ್ಲಿ ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಸಾವು
ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವು ಹೊಸ ಕೃಷಿ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು. ಎಲ್ಲಾ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಯಶವಂತರಾವ್ ಘೋರ್ಪಡೆ, ಹಿರಯಣ್ಣಯ್ಯ, ಜಗದೀಶ್ ನಾಯಕ್, ಹೆಚ್.ಎಸ್. ಮಂಜುನಾಥೇಶ್ವರ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post