ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಹೊಸ ವರ್ಷದ ಕಲ್ಪತರು ದಿನದಂದು ಪ್ರತಿವರ್ಷದಂತೆ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಬಾಂಧವ್ಯವನ್ನು ಬೆಸೆಯುವ ಜನ್ಮದಾತರ ಪಾದಪೂಜೆ ಸಮಾರಂಭವನ್ನು ಜನವರಿ 1 ರಂದು ಆಯೋಜಿಸಲಾಗಿದೆ.
ಅನುಪಿನಕಟ್ಟೆಯಲ್ಲಿನ ಗುರುಕುಲ ಶಾಲಾ ಅವರಣದಲ್ಲಿ ಬೆಳಿಗ್ಗೆ 10ಗಂಟೆಗೆ 600 ವಿದ್ಯಾರ್ಥಿಗಳು ಅವರ ಜನ್ಮದಾತರಿಗೆ ಶಾಸ್ತ್ರೋಕ್ತವಾಗಿ ಪಾದಪೂಜೆ ಮಾಡಲಿದ್ದಾರೆ. ಎಲ್ಲಾ ಪೋಷಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ.
ಪಾದಪೂಜೆ ಸಮಾರಂಭದ ವಿವರ:
ಜನವರಿ 1ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ಸತ್ಯನಾರಾಯಣ ಸ್ವಾಮಿ ಪೂಜೆ, 10 ಗಂಟೆಗೆ ಮೂಲೆಗದ್ದೆ ಮಠ ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸರ್ಜಿ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ಧನಂಜಯ ಸರ್ಜಿ, ಹಾಗೂ ಶಾಲೆಯ ಹಿಂದಿನ ವಿದ್ಯಾರ್ಥಿ ಡಾ. ಅಭಿನಂದನ್ ಎಲಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಡಾ. ಡಿ ಆರ್ ನಾಗೇಶ್ ಅಧ್ಯಕ್ಷತೆ ವಹಿಸಿರುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರು ಡಿ. ಎಂ. ದೇವರಾಜ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post