No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜುಲೈ 24ರಂದು 1700ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಚಾಲನೆ: ಸಚಿವ ಈಶ್ವರಪ್ಪ

kalpa News by kalpa News
July 21, 2021
in ಶಿವಮೊಗ್ಗ
0
ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳನ್ನು ಕೈಗೊಳ್ಳಲಾಗುತ್ತಿರುವ ಸುಮಾರು 1700ಕೋಟಿ ರೂ. ಮೊತ್ತದ ಯೋಜನೆಗಳಿಗೆ ಜುಲೈ 24ರಂದು ಮಾನ್ಯ ಮುಖ್ಯಮಂತ್ರಿಗಳು ವರ್ಚ್ಯುವಲ್ ಮೀಡಿಯಾ ಮುಖಾಂತರ ಚಾಲನೆ ನೀಡುವರು ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿ ಮಾತನಾಡುತ್ತಿದ್ದರು. ನಗರದ ಕುವೆಂಪು ರಂಗಮಂದಿರದಲ್ಲಿ ಆಯಾ ತಾಲೂಕುಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಕ್ರಮ ವರ್ಚುವಲ್ ಮಾಧ್ಯಮದ ಮೂಲಕ ನಡೆಯಲಿದೆ. ಬೆಂಗಳೂರಿನಿಂದಲೇ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜುಲೈ 24ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಪರಿಷತ್, ವಿಧಾನಸಭಾ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

ಈ ಯೋಜನೆಗಳಲ್ಲಿ ಬಹುಪ್ರಮುಖವಾಗಿ 185ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿ, 100ಕೋಟಿ ರೂ.ಗಳ ವೆಚ್ಚದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ, 120ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಜಿಲ್ಲಾಡಳಿತ ಭವನ, 15 ಕೋಟಿ ರೂ.ಗಳ ವೆಚ್ಚದಲ್ಲಿ ಎನ್.ಜಿ.ಒ. ಕ್ವಾಟ್ರಸ್ ಕಟ್ಟಡ ಕಾಮಗಾರಿ, 107.89ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿ, 6ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಇ.ಬಿ. ವೃತ್ತದಲ್ಲಿರುವ ನೌಕರರ ಸಮುದಾಯ ಭವನ ನಿರ್ಮಾಣ, 1.50ಕೋಟಿ ವೆಚ್ಚದಲ್ಲಿ ಸಾಗರ ತಾಲೂಕು ನೀರುಕೋಡು ಗ್ರಾಮದಲ್ಲಿ ಸಾರ್ವಜನಿಕ ಸಮುದಾಯ ಭವನ, 10ಕೋಟಿ ರೂ.ಗಳ ವೆಚ್ಚದಲ್ಲಿ ಸ್ಮಾರ್ಟ್‌ರಸ್ತೆಗಳು, 20.89ಕೋಟಿ ರೂ.ಗಳ ವೆಚ್ಚದಲ್ಲಿ ಸಕ್ರೆಬೈಲಿನಲ್ಲಿ ಜೈವಿಕ ಉದ್ಯಾನವನ ಅಭಿವೃದ್ಧಿ ಕಾಮಗಾರಿ, 32ಕೋಟಿ ರೂ.ಗಳ ವೆಚ್ಚದಲ್ಲಿ ಊರಗಡೂರು ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣ, 55ಕೋಟಿ ರೂ.ಗಳ ವೆಚ್ಚದಲ್ಲಿ ರಾ.ಹೆ.169ರ (ತೀರ್ಥಹಳ್ಳಿ ಪಟ್ಟಣದಲ್ಲಿ ದ್ವಿಪಥದ ಬೃಹತ್ ಸೇತುವೆ ಮತ್ತು ಬೈಪಾಸ್ ರಸ್ತೆ), ರಾ.ಹೆ.206ರಲ್ಲಿ ಸಾಗರ ನಗರ ವ್ಯಾಪ್ತಿಯಲ್ಲಿ 4ಪಥದ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದೆ.

155ಕೋಟಿ ರೂ.ಗಳ ವೆಚ್ಚದಲ್ಲಿ ಇರುವಕ್ಕಿಯಲ್ಲಿ ನಿರ್ಮಾಣಗೊಂಡಿರುವ ಕೃಷಿ ವಿಶ್ವವಿದ್ಯಾಲಯದ ಕಟ್ಟಡ ಉದ್ಘಾಟನೆ, 850 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡಗಣಿ-ತಾಳಗುಂದ-ಹೊಸೂರು ಹೋಬಳಿಗಳ ಸುಮಾರು 255ಕೆರೆಗಳಿಗೆ ನೀರು ತುಂಬುವ ಏತ ನೀರಾವರಿ ಯೋಜನೆಯ ಲೋಕಾರ್ಪಣೆ, 100ಕೋಟಿ ರೂ.ಗಳ ವೆಚ್ಚದಲ್ಲಿ ೫೦ಹಾಸಿಗೆ ವ್ಯವಸ್ಥೆ ಹೊಂದಿರುವ ಹೃದಯರೋಗ ವಾರ್ಡ್ ಕ್ಯಾಥ್‌ಲ್ಯಾಬ್ ಉದ್ಘಾಟನೆಗೊಳ್ಳಲಿವೆ.

ಅಲ್ಲದೆ 9.19ಕೋಟಿ ವೆಚ್ಚದಲ್ಲಿ ಮುಖ್ಯ ಇಂಜಿನಿಯರ್ ಕಟ್ಟಡ ನಿರ್ಮಾಣ ಕಾಮಗಾರಿ, 41.39ಕೋಟಿ ವೆಚ್ಚದಲ್ಲಿ ನವುಲೆಯಲ್ಲಿ ಮೆಸ್ಕಾಂ ಶಾಖಾಧಿಕಾರಿಗಳ ಕಚೇರಿ ಕಟ್ಟಡ, 4.81ಕೋಟಿ ರೂ.ಗಳ ವೆಚ್ಚದ ಭದ್ರಾವತಿ ನಗರದ ಮೆಸ್ಕಾಂ ವಿಭಾಗೀಯ ಕಚೇರಿ ಹಾಗೂ ಶಿವಮೊಗ್ಗದಲ್ಲಿ 1.10ಕೋಟಿ ರೂ.ಗಳ ವೆಚ್ಚದಲ್ಲಿ ಶಿವಮೊಗ್ಗ ನಗರದಲ್ಲಿ ನಿರ್ಮಿಸಿರುವ ಮೆಸ್ಕಾಂ ಅತಿಥಿಗೃಹ ಕಟ್ಟಡಗಳು ಲೋಕಾರ್ಪಣೆಗೊಳ್ಳಲಿವೆ ಎಂದರು.

ಬಸವೇಶ್ವರರ ಪುತ್ಥಳಿ ಅನಾವರಣ:
ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಹಾಗೂ ಗಾಂಧಿ ಪಾರ್ಕ್‌ನ ಪ್ರವೇಶ ದ್ವಾರದಲ್ಲಿ ಮೂರು ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು ಎಂದು ಪಂಚಾಯತ್‌ರಾಜ್, ಗ್ರಾಮೀಣಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಸದರಿ ಪುತ್ಥಳಿ ಅನಾವರಣಗೊಳಿಸಲು ಇರಬಹುದಾದ ಎಲ್ಲಾ ತೊಡಕುಗಳನ್ನು ನಿವಾರಿಸಲಾಗಿದೆ. ಈ ಪುತ್ಥಳಿ ಅನಾವರಣಗೊಳಿಸುವ ಸಂಬಂಧ ಇತ್ತೀಚೆಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ಜುಲೈ 24ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿಗಳು ವರ್ಚ್ಯುವಲ್ ಮೀಡಿಯಾ ಮುಖಾಂತರ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ. ಅಂದು ನಡೆಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಗಣ್ಯರು, ವಿವಿಧ ಧರ್ಮಗಳ ಮುಖಂಡರುಗಳನ್ನು ಆಹ್ವಾನಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಮೇಯರ್ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಚನ್ನಬಸಪ್ಪ, ಜ್ಞಾನೇಶ್ವರ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga Newsಶಿವಮೊಗ್ಗ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಸಂಗಮೇಶ್ವರ್ ಚಾಲನೆ

Next Post

ಸಪ್ತಪದಿ ಸರಳ ವಿವಾಹೋತ್ಸವ ಪುನರಾರಂಭ : ಕೋಟ ಶ್ರೀನಿವಾಸ ಪೂಜಾರಿ

kalpa News

kalpa News

Next Post
ಜುಲೈ 21: ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಸಪ್ತಪದಿ ಸರಳ ವಿವಾಹೋತ್ಸವ ಪುನರಾರಂಭ : ಕೋಟ ಶ್ರೀನಿವಾಸ ಪೂಜಾರಿ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL