No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂ.20ರಂದು ಡಿ.ಹೆಚ್. ಶಂಕರಮೂರ್ತಿರವರಿಗೆ ನಾಗರಿಕ ಅಭಿನಂದನಾ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 15, 2023
in ಶಿವಮೊಗ್ಗ
0
ಜೂ.20ರಂದು ಡಿ.ಹೆಚ್. ಶಂಕರಮೂರ್ತಿರವರಿಗೆ ನಾಗರಿಕ ಅಭಿನಂದನಾ ಸಮಾರಂಭ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿರವರಿಗೆ D H Shankaramurthy ಸಮಾನ ಮನಸ್ಕ ನಾಗರಿಕ ವೇದಿಕೆಯಾದ ಶಿವಮೊಗ್ಗ ಸಿಟಿಜನ್ ಫೋರಂ ವತಿಯಿಂದ ಜೂ.20ರಂದು ಸಂಜೆ 6ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಾಗರಿಕ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಫೋರಂ ಅಧ್ಯಕ್ಷ ಹಾಗೂ ವಕೀಲರಾದ ಕೆ. ಬಸಪ್ಪ ಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾರಂಭದ ಸಾನಿಧ್ಯ ಮತ್ತುಉದ್ಘಾಟನೆಯನ್ನು ರಾಜ್ಯಸಭಾ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ನೆರವೇರಿಸಲಿದ್ದಾರೆ. ವಿಧಾನಸಭಾ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ವಿಧಾನಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರುಗಳಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾ ನಾಯ್ಕ, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮೇಯರ್ ಶಿವಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

ಡಾ. ಡಿ.ಹೆಚ್. ಶಂಕರಮೂರ್ತಿಯವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಬೆಳೆದು ಬಂದವರು. 1971ರಲ್ಲಿ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಪಾಲ್ಗೊಂಡವರು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯದ ಗಮನವನ್ನು ಸೆಳೆದವರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸೆರೆಮನೆಗೆ ಹೋದವರು ಎಂದರು.
1988ರಲ್ಲಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನ ಪರಿಷತ್‍ಗೆ ಪ್ರವೇಶ ಪಡೆದ ಇವರು, 2006ರ ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ 20 ತಿಂಗಳ ಕಾಲ ಉನ್ನತ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು. ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅತ್ಯಂತ ಸರಳ ವ್ಯಕ್ತಿತ್ವದ ಸಂಯಮದ ರಾಜಕಾರಣಿ. ಇದೀಗ ಸಕ್ರಿಯ ರಾಜಕಾರಣದಿಂದಲೇ ದೂರ ಸರಿದಿದ್ದಾರೆ. ಇವರನ್ನು ಸನ್ಮಾನ ಮಾಡುವುದು ನಮಗೆ ಹೆಮ್ಮೆಯಾಗಿದೆ ಎಂದರು.

Also read: Amit Shah unveils Rs 8,000 crore plan for modernising fire services, mitigating urban flooding risk
ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಡಿ.ಹೆಚ್. ಶಂಕರಮೂರ್ತಿಯವರ ಅಭಿಮಾನಿಗಳು, ರೈತಮುಖಂಡರು, ವಿವಿಧ ಪಕ್ಷದ ರಾಜಕೀಯ ಮುಖಂಡರು ಸೇರಿ ರಾಜಕೀಯೇತರವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಿಟಿಜನ್ ಫೋರಂ ಸಮಾನ ಮನಸ್ಕರ ನಾಗರೀಕ ವೇದಿಕೆಯಾಗಿದೆ ಇಲ್ಲಿ ನ್ಯಾಯವಾದಿಗಳು ವೈದ್ಯರು, ಲೆಕ್ಕ ಪರಿಶೋಧಕರು, ಪತ್ರಕರ್ತರು, ವ್ಯಾಪಾರಿಗಳು, ಶಿಕ್ಷಣ ತಜ್ಞರು, ವಿವಿಧ ಸಂಘ ಸಂಸ್ಥೆಗಳ ಮುಖಂಡರನ್ನು ಒಳಗೊಂಡ ವೇದಿಕೆಯಾಗಿದೆ. ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು, ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತದೆ. ಮುಖ್ಯವಾಗಿ ಹಿರಿಯ ಚೇತನಗಳನ್ನು ಗುರುತಿಸುತ್ತದೆ. ವೇದಿಕೆಯ ಮೊದಲನೆಯ ಕಾರ್ಯಕ್ರಮವಾಗಿ ವಿಶ್ರಾಂತ ಜೀವನ ನಡೆಸುತ್ತಿರುವ ಡಿ.ಎಚ್. ಶಂಕರಮೂರ್ತಿಯವರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದ್ದು, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಫೋರಂನ ಪ್ರಮುಖರಾದ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಡಾ. ಪಿ. ನಾರಾಯಣ, ಎಂ.ಎನ್. ಸುಂದರರಾಜ್, ದಿಲೀಪ್‍ಕುಮಾರ್ ಪಾಂಡೆ, ಕೆ.ಟಿ. ಗಂಗಾಧರ್, ಚೇತನ್, ರಮೇಶ್‍ಬಾಬು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: D.H. SHANKARAMURTHYKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಡಿ.ಹೆಚ್. ಶಂಕರಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share213Tweet123Send
Previous Post

Amit Shah unveils Rs 8,000 crore plan for modernising fire services, mitigating urban flooding risk

Next Post

ಜೂನ್ 20, 21: ‘ಎನ್‌ಇಎಸ್ ಹಬ್ಬ’: ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎ.9ರಂದು ಎನ್ಇಎಸ್ ನೌಕರರಿಗೆ ‘ಅಮೃತ ಕ್ರೀಡೋತ್ಸವ’

ಜೂನ್ 20, 21: 'ಎನ್‌ಇಎಸ್ ಹಬ್ಬ': ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL