ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಜಿಲ್ಲಾ ಪ್ರಾಣಿ ದಯಾ ಸಂಘ, ಶಿವಮೊಗ್ಗ ಹಾಗೂ ಗ್ರಾಮ ಪಂಚಾಯ್ತಿ ಮೇಲಿನಬೆಸಿಗೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹೊಸನಗರ ತಾಲ್ಲೂಕು ಹುಂಚ ಹೋಬಳಿ, ಮೇಲಿನಬೆಸಿಗೆ ಗ್ರಾ.ಪಂ ಯ ಗೊರಗೋಡು ಗ್ರಾಮದಲ್ಲಿ ಸರ್ಕಾರದ ವತಿಯಿಂದ ‘ಜಿಲ್ಲೆಗೊಂದು ಗೋಶಾಲೆ’ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ಮೇ 15 ರ ಸಂಜೆ 4 ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ. ನಾರಾಯಣಗೌಡ ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸುವರು. ಪಶುಸಂಗೋಪನಾ ಸಚಿವರಾದ ಪ್ರಭು ಬಿ.ಚೌಹಾಣ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಗೌರವ ಉಪಸ್ಥಿತಿ ಇರಲಿದೆ.
Also read: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ: ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆ ಬಗ್ಗೆ ಚರ್ಚೆ
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರು, ಮೇಲಿನಬೆಸಿಗೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಶುಪಾಲನಾ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಶುಪಾಲನಾ ಇಲಾಖೆ ಉಪನಿರ್ದೇಶಕರು, ಸಾಗರ ಉಪವಿಭಾಗದ ಉಪವಿಭಾಗಾಧಿಕಾರಿ, ಇತರೆ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post