ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿಯ ನೂತನ ಶಾಖೆಯ ಉದ್ಘಾಟನಾ ಸಮಾರಂಭ ನ.20ರ ಭಾನುವಾರ ಮಧ್ಯಾಹ್ನ 3ಗಂಟೆಗೆ ಸಾಗರದ ಆನಂದಪುರದಲ್ಲಿ ನಡೆಯಲಿದೆ.
ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ರಾಜ್ಯ ಸೌಸಂಸನಿ ಉಪಾಧ್ಯಕ್ಷ ಎ.ಆರ್. ಪ್ರಸನ್ನಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಅಧ್ಯಕ್ಷ ಎಂ.ಆರ್. ಗೀಪಾಲಕೃಷ್ಣ ಪಂಡಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸ್ಥಾಪಕ ಅಧ್ಯಕ್ಷ ದೇವದಾದ್ ಎನ್. ನಾಯಕ್, ಭಾಸ್ಕರ್ ಜಿ. ಕಾಮತ್, ಶ್ರೀನಿವಾಸ ಕಾಮತ್, ಪ್ರಕಾಶ್ ನಾಯಕ್ ಉಪಸ್ಥಿತರಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post