ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಮೃತ ಅನ್ನದಾಸೋಹ ಪ್ರತಿಷ್ಠಾನದ ವತಿಯಿಂದ ಹಸಿದವರ ಹೊಟ್ಟೆ ತುಂಬಿಸುವ ಅಮೃತ ಅನ್ನದಾಸೋಹ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಉದ್ಘಾಟನೆ ಸೆ.13ರ ಬೆಳಿಗ್ಗೆ 11.30ಕ್ಕೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎ. ಸತೀಶ್‌ಕುಮಾರ್ ಶೆಟ್ಟಿ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನ ಮನಸ್ಕರರು ಸೇರಿಕೊಂಡು ಈ ಮಾನವೀಯ ಯೋಜನೆಯನ್ನು ಜಾರಿಗೆ ತಂದಿದ್ದು, ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಾರ್ಡ್‌ನಲ್ಲಿ ಹೆಚ್ಚಿನ ಜನರು ಇರುತ್ತಾರೆ. ಇವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಸಿದವರು ಇರುತ್ತಾರೆ. ಇತಂಹವರಿಗೆ ಅನ್ನದಾಸೋಹವನ್ನು ಪ್ರತಿಷ್ಠಾನದಿಂದ ನೀಡಲಾಗುತ್ತಿದೆ ಎಂದರು.
ಆರಂಭದಲ್ಲಿ ಬುಧವಾರ ಮತ್ತು ಶುಕ್ರವಾರದಂದು ಮಧ್ಯಾಹ್ನ 12.30ರಿಂದ 2ಗಂಟೆಯವರೆಗೆ ಸುಮಾರು 200 ಜನರಿಗೆ ದಾಸೋಹದ ವ್ಯವಸ್ಥೆ ಇರುತ್ತದೆ. ಈ ನಮ್ಮ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದರು.
Also read: ಸೆ.13, 14 | ಗಿರೀಶ್ ಕಾಸರವಳ್ಳಿಯವರ ಚಿತ್ರಗಳ ಅವಲೋಕನ | ಬಿಂಬ ಬಿಂಬನ ಪುಸ್ತಕ ಬಿಡುಗಡೆ
ಈ ಯೋಜನೆಯನ್ನು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಶಿವಮೊಗ್ಗ ನಾಗರೀಕ ಹಿತ ರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತಕುಮಾರ್ ಆಗಮಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಆರ್. ಸತ್ಯನಾರಾಯಣ, ಪ್ರಭಾಕರ್, ದಿನೇಶ್, ಕಲ್ಯಾಣಿ, ರೂಪಾ, ನೇತ್ರಾವತಿ, ಭಮಿತಾ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post