ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಒಂದು ದಿನದ ಸ್ವಚ್ಛತಾ ಶಿಬಿರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರಾಂತೀಯ ಕೇಂದ್ರ, ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. 150ಕ್ಕೂ ಹೆಚ್ಚು ಎನ್‌ಎಸ್‌ಎಸ್ ಸ್ವಯಂ ಸೇವಕರು ಭಾಗವಹಿಸಿದ್ದ ಈ ಶಿಬಿರದಲ್ಲಿ ವಿದ್ಯಾನಗರದ ಬೀದಿಗಳಲ್ಲಿ ಸ್ವಚ್ಛತಾ ಜಾಗೃತಿ ಜಾಥಾ ಮತ್ತು ಕಾಲೇಜಿನ ಆವರಣದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ಹಾಗೂ ಶಿಭಿರಾರ್ಥಿಗಳಿಗೆ ಉಚಿತ ಕೋವಿಡ್ ಪರೀಕ್ಷೆ ಮಾಡಿಸಲಾಯಿತು.
ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ, ಇವರು ಗಿಡಕ್ಕೆ ನೀರೆರೆಯುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶಿಬಿರದಲ್ಲಿ ಉತ್ಸಾಹದಿಂದ ಭಾಗವಹಿಸಿದಂತೆಯೇ ತಮ್ಮ ಮನೆ ಹಾಗೂ ಕಾಲೇಜಿನಲ್ಲಿ ದಿನನಿತ್ಯವೂ ಸ್ವಚ್ಚತೆ ಮತ್ತು ಪರಿಸರ ಸಂರಕ್ಷಣೆಯ ಕಾರ್ಯವನ್ನು ಮೈಗೂಡಿಸಿಕೊಳ್ಳಬೇಕು. ಇಂತಹ ಶಿಬಿರಗಳು ನಮಗೆ ಮನೋಸ್ಥೈರ್ಯವನ್ನು ಹೆಚ್ಚಿಸಿ, ಸೇವಾ ಮನೋಭಾವ, ಸಹೋದರತ್ವ ಭಾವನೆ, ಸಹಜವಾಗಿಯೇ ಮೈಗೂಡಿಸಿಕೊಳ್ಳುವಂತೆ ಪ್ರೇರೆಪಿಸುತ್ತವೆ ಎಂದು ತಿಳಿಸಿದರು.
ನಂತರ ಸ್ವಯಂ ಸೇವಕರನ್ನುದ್ದೇಶಿಸಿ ಉಪನ್ಯಾಸ ನೀಡಿದ ಎನ್‌ಎಸ್‌ಎಸ್ ಪೂರ್ವ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಕುಂದನ್ ಬಸವರಾಜ್, ಯುವಜನತೆ ಮತ್ತು ಸೇವಾ ಮನೋಭಾವ ಎಂಬ ವಿಷಯದ ಬಗ್ಗೆ ಮಾತನಾಡಿಮ ಯುವಜನತೆಯು ಸೇವೆಯ ಮೂಲಕ ದೇಶಕ್ಕೆ, ಸಮಾಜಕ್ಕೆ ನಮ್ಮ ಋಣವನ್ನು ತೀರಿಸುವ ಸುಲಭ ಮಾರ್ಗವಾಗಿದೆ ಎಂದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕ ಡಾ.ರಮೇಶ್ ಬಾಬು ಮಾತನಾಡಿ, ಸೋಲು-ಗೆಲುವಿನ ಬಗ್ಗೆ ಅರ್ಥಪೂರ್ಣವಾಗಿ ವಿವರಿಸಿದರು. ದಾವಣಗೆರೆ ವಿ.ವಿ. ಪ್ರಾಧ್ಯಾಪಕರಾದ ಡಾ.ಪ್ರಮೋದ್ ಇವರು ಸಹ್ಯಾದ್ರಿ ಕಾಲೇಜಿನ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಿ ಕೆಲಸ ಮಾಡಿದ ದಿನಗಳ ಅಪರೂಪದ ಸುಂದರ ಕ್ಷಣಗಳನ್ನು ಹಂಚಿಕೊಂಡರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್.ಎಮ್. ವಾಗ್ದೇವಿ ಇವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಬಾಹ್ಯ ಸ್ವಚ್ಛತೆಯ ಜೊತೆಗೆ ಆಂತರಿಕ ಸ್ವಚ್ಛತೆಯ ಬಗ್ಗೆಯೂ ಗಮನಹರಿಸುವುದು ಬಹಳ ಮುಖ್ಯ ಎಂದರು.
ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ಪಿ.ವೆಂಕಟೇಶ್ ಸ್ವಾಗತಿಸಿ, ಡಾ. ಪ್ರಭಾಕರ ವಂದಿಸಿದರು. ಡಾ. ಪವಿತ್ರ, ಉಪನ್ಯಾಸಕರು ಹಾಗೂ ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಸಹಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post