ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಿಇಎಸ್ ಐಟಿಎಂನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವತಿಯಿಂದ ಎಮರ್ಜಿಂಗ್ ಇನ್ನೋವೇಷನ್ ಇನ್ ಕಂಪ್ಯೂಟರ್ ಸೈನ್ಸ್ ಎಂಡ್ ಟೆಕ್ನಾಲಜಿ (NCEICT – 2023) ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು.
ಸುರತ್ಕಲ್ ನ NITK ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಅಣ್ಣಪ್ಪ ಬಿ ಅವರು ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪಿಇಎಸ್ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜಕರಾದ ಡಾ ನಾಗರಾಜ ಆರ್ ಅವರು ಉಪಸ್ಥಿತರಿದ್ದರು.
ಪಿಇಎಸ್ ಐಟಿಎಂನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಹಾಗೂ ಸಂಚಾಲಕರಾದ ಡಾ. ಅರ್ಜುನ್ ಸ್ವಾಗತಿಸಿದರು. ಕಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಸಹ ಸಂಚಾಲಕರಾದ ರಂಜನ್ ವಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಸಮಾರಂಭದಲ್ಲಿ ಪ್ರೊಸಿಡಿಂಗ್ಸ್‌ನ್ನು ಮುಖ್ಯ ಅತಿಥಿಗಳು ಮತ್ತು ಗಣ್ಯರು ಬಿಡುಗಡೆಗೂಳಿಸಿದರು.
ಪಿಇಎಸ್ ಐಟಿಎಂನ ಪ್ರಾಂಶುಪಾಲರಾದ ಡಾ. ಚೈತ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಸಂಚಾಲಕರಾದ ಡಾ. ಸುನೀತ ವಂದಿಸಿದರು.
ಒಟ್ಟು 57 ಪ್ರಬಂಧಗಳು ಸಮ್ಮೇಳನದಲ್ಲಿ ಮಂಡನೆಯಾದವು. ಸಮಾರೋಪ ಸಮಾರಂಭದಲ್ಲಿ ಅತ್ಯುತ್ತವಾಗಿ ಪ್ರಬಂಧ ಮಂಡಿಸಿದವರಿಗೆ ಪ್ರಶಸ್ತಿಯನ್ನು ನೀಡಲಾಯಿತು. ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸಾರಾ ಮುಸ್ಕಾನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post