ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ Pahalgam Attack ಮೃತಪಟ್ಟಿದ್ದ ಶಿವಮೊಗ್ಗದ ಮಂಜುನಾಥ್ Shivamogga Manjunath ಅವರ ನಿವಾಸಕ್ಕೆ ಇಂದು ಶಾಸಕ ಚನ್ನಬಸಪ್ಪ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
ಮೃತ ಮಂಜುನಾಥ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು. ಮಗನ ಶೈಕ್ಷಣಿಕ ಸಾಧನೆಯನ್ನು ಸಂಭ್ರಮಿಸಲು ತೆರಳಿದ್ದ ಸಂದರ್ಭದಲ್ಲಿ ನಡೆದ ಈ ಘಟನೆ ಎಂದಿಗೂ ಮರೆಯಲಾಗದ್ದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನವಲೆ ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಜ್ಞಾನೇಶ್ವರ್, ಪ್ರಮುಖರಾದ ರವಿಕಿರಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















