No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯಾವುದೇ ಸಂದರ್ಭದಲ್ಲಿ ಕಲಿಕೆಗೆ ಅವಕಾಶ ನೀಡಲು ಆನ್‌ಲೈನ್ ಪೂರಕ

ಜೆಎನ್‌ಎನ್‌ಸಿಇ: ಸಂಯೋಜಿತ ಬೋಧನೆ ಕಲಿಕೆ ವಿಧಾನ ವಿಚಾರ ಸಂಕಿರಣ

kalpa News by kalpa News
June 5, 2021
in ಶಿವಮೊಗ್ಗ
0
ಯಾವುದೇ ಸಂದರ್ಭದಲ್ಲಿ ಕಲಿಕೆಗೆ ಅವಕಾಶ ನೀಡಲು ಆನ್‌ಲೈನ್ ಪೂರಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಸಂಯೋಜಿತ ಬೋಧನೆ ಎಂದಾಗ ವಿದ್ಯಾರ್ಥಿ ಕೇಂದ್ರಿತ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಈ ಮೂಲಕ ವಿದ್ಯಾರ್ಥಿಗಳಿಗೆ ಯಾವುದೇ ಸಮಯ ಸಂದರ್ಭದಲ್ಲಿಯೂ ಕಲಿಕೆಗೆ ಅವಕಾಶ ನೀಡಲು ಆನ್ಲೈನ್ ಪೂರಕ ವೇದಿಕೆಯಾಗಿ ನಿಲ್ಲಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು.

ಇಂದು ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ ವಿಭಾಗದ ವತಿಯಿಂದ ಉಪನ್ಯಾಸಕರಿಗಾಗಿ ಏರ್ಪಡಿಸಿದ್ದ ‘ಸಂಯೋಜಿತ ಬೋಧನೆ ಮತ್ತು ಕಲಿಕೆ ವಿಧಾನಗಳ’ ಕುರಿತ ವಿಚಾರ ಸಂಕಿರಣ ಉದ್ದೇಶಿಸಿ ಅವರು ಮಾತನಾಡಿದರು.

ಡಿಜಿಟಲ್ ವೇದಿಕೆಗಳ ಅನುಷ್ಟಾನಗೊಳಿಸುವುದರ ಮೂಲಕ ಬೋಧನೆಯ ಗುಣಮಟ್ಟ ಹೆಚ್ಚಿಸಲು ಸಾಧ್ಯವಾಗಿದೆ. ವಿದ್ಯಾರ್ಥಿಗಳು ಸಮಯದ ನಿರ್ಭಂದಗಳಿಲ್ಲದೆ ಯಾವುದೇ ವಿಷಯಗಳ ಅಧ್ಯಯನ ನಡೆಸಲು ಮತ್ತು ತಮ್ಮ ಉಪನ್ಯಾಸಕರೊಂದಿಗೆ ಮುಕ್ತವಾಗಿ ಚರ್ಚಿಸಬಹುದಾಗಿದೆ. ಅದರೇ ಡಿಜಿಟಲ್ ವೇದಿಕೆಗಳ ಅನುಷ್ಟಾನ ದೊಡ್ಡ ಸವಾಲಾಗಿದೆ. ಇಂದಿಗೂ ಹಲವು ಪ್ರದೇಶಗಳು ನೆಟ್‌ವರ್ಕ್‌ಗಳ ಸಮಸ್ಯೆಯಿಂದ ಬಳಲುತ್ತಿದೆ. ಈ ಸವಾಲುಗಳ ನಡುವೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕಲಿಕೆಯ ಅವಶ್ಯಕತೆ, ಉಚಿತವಾಗಿ ಲಭ್ಯವಿರುವ ಹಲವು ಅಧ್ಯಯನ ಸಾಮಾಗ್ರಿಗಳು ಹಾಗೂ ಅವುಗಳ ಲಾಭದ ಕುರಿತು ಪ್ರೇರಣೆ ನೀಡಬೇಕಾಗಿದೆ ಎಂದು ಹೇಳಿದರು.

ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ. ಎಸ್.ಎನ್.ಜಗದೀಶ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಆನ್ಲೈನ್‌ಗಳ ಬಳಕೆ ಹೆಚ್ಚಾಗಿದೆ. ಈ ಮೂಲಕ ಸಾಕಷ್ಟು ಹೊಸ ಅನುಭವಗಳನ್ನು ಪಡೆದಿದ್ದೇವೆ. ಭಾರತ ಸರ್ಕಾರ ಅನುಷ್ಟಾನಗೊಳಿಸುತ್ತಿರುವ ನೂತನ ಐ.ಟಿ ಕಾಯ್ದೆಯ ಆಧಾರದಲ್ಲಿ ನೂತನ ಶಿಕ್ಷಣ ನೀತಿಯ ವ್ಯಾಪ್ತಿಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗವು ಸಂಯೋಜಿತ ಬೋಧನೆ ಮತ್ತು ಕಲಿಕೆಗಳ ವಿಧಾನಗಳನ್ನು ಅನುಷ್ಟಾನಗೊಳಿಸಲು ತಯಾರಿ ನಡೆಸಿದೆ. ಉನ್ನತ ಮಟ್ಟದ ಶಿಕ್ಷಣದಲ್ಲಿ ಶೇ.40ರಷ್ಟು ಪಠ್ಯಕ್ರಮ ಆನ್ಲೈನ್ ಮೂಲಕವು ಹಾಗೂ ಶೇ.60ರಷ್ಟು ಪಠ್ಯಕ್ರಮ ದೈನಂದಿನ ಬೋಧನಾ ಕ್ರಮದಲ್ಲಿ ನಡೆಸಲು ಚಿಂತನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಆಯೋಗವು ಸಲಹೆಗಳನ್ನು ಆಹ್ವಾನಿಸಿ ಸಾರ್ವಜನಿಕ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಆಯೋಗ ಅನುಷ್ಟಾನಗೊಳಿಸಲು ಹೊರಟಿರುವ ಸಂಯೋಜಿತ ಭೋಧನ ಕಲಿಕೆ ವಿಧಾನಗಳು ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ಜೊತೆಗೆ ಅವರು ಇಚ್ಚಿಸುವ ಹಲವು ಇತರೇ ವಿಷಯಗಳ ಕುರಿತ ಅಧ್ಯಯನ ನಡೆಸಲು ಅವಕಾಶ ನೀಡಲಿದೆ ಎಂದರು.

ಶೈಕ್ಷಣಿಕ ಪರಿವರ್ತನೆಯ ಮೂಲಕ ವಿದ್ಯಾರ್ಥಿಗಳ ತಾವು ಇಚ್ಚಿಸುವ ವಿಷಯ, ಬೋಧನಾ ಕ್ರಮ, ಬೋಧಕ ವರ್ಗ, ಬೋಧನಾ ಸಮಯ, ಬೋಧನಾ ಭಾಷೆಗಳ ಕುರಿತಾಗಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ತಾವು ಇರುವ ಸ್ಥಳದಿಂದಲೇ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳಲ್ಲಿ ಅಧ್ಯಯನ ನಡೆಸಲು ಮತ್ತು ಅಲ್ಲಿನ ವಿಷಯಗಳ ಕುರಿತು ಅರಿವು ಪಡೆಯಲು ಸಾಧ್ಯವಾಗಲಿದೆ. ಕಲೆ, ಸಾಹಿತ್ಯ, ವಿಜ್ಞಾನ, ವಾಣಿಜ್ಯ ವಿಚಾರಗಳ ಕುರಿತು ಮುಕ್ತವಾಗಿ ಕಲಿಕೆ ತೊಡಗಿಸಿಕೊಳ್ಳಲು ಸರ್ಕಾರದ ಎನ್.ಪಿ.ಟಿ.ಎಲ್, ಸ್ವಯಂ ಆಪ್‌ಗಳ ಮೂಲಕ ಅವಕಾಶ ಮಾಡಿಕೊಡಲಾಗಿದೆ. ಈ ಎಲ್ಲಾ ಕಾರ್ಯ ಯೋಜನೆ ಅನುಷ್ಟಾನಗಳಿಸಲು ಆಯೋಗ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡುತ್ತಿದ್ದು, ಆನ್ಯೈನ್ ಆಫ್ಲೈನ್‌ನಂತಹ ಶೇಕಡವಾರು ಬೋಧನೆಯ ವಿಗಂಡನೆ ಮತ್ತು ಬೋಧನಾ ವರ್ಗ, ಕ್ರಮ, ಸಮಯ ಆಯ್ಕೆಯ ಸೌಲಭ್ಯ ನೀಡುವ ಕುರಿತು ಹೆಚ್ಚು ಚರ್ಚೆಗಳ ಅವಶ್ಯಕತೆಯಿದೆ ಎಂದು ಹೇಳಿದರು.
ವಿಚಾರ ಸಂಕಿರಣದ ಚರ್ಚೆಯಲ್ಲಿ ಬೋಧನೆಯ ಶೇಕಡವಾರು ವಿಗಂಡನೆಯಲ್ಲಿ ಆನ್ಲೈನ್‌ಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ. ಆದರೆ, ಕೋವಿಡ್ ನಂತರದ ಸಂದರ್ಭದಲ್ಲಿ ಇಂತಹ ವಿಗಂಡನೆಯ ಮರು ವಿಮರ್ಶೆಗೊಳ್ಳಬೇಕಿದೆ. ಶೈಕ್ಷಣಿಕತೆಯ ಜೊತೆಗೆ ಹಲವು ಕ್ರಿಯಾಶೀಲ ಚಟುವಟಿಕೆಗಳಲ್ಲಿ ವಿದ್ಯಾರ್ಥಿ ತೊಡಗಿಸಿಕೊಳ್ಳಲು ದೈನಂದಿನ ಬೋಧನಾ ಕ್ರಮಗಳಲ್ಲಿ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ದೈನಂದಿನ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಮುಕ್ತವಾಗಿ ಅಧ್ಯಯನ ನಡೆಸಲು ಆನ್ಲೈನ್ ವೇದಿಕೆಗಳು ಬಳಸಿಕೊಳ್ಳುವಂತಾಗಲಿ ಎಂಬ ಅಭಿಪ್ರಾಯ ಮೂಡಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕುಲಸಚಿವರಾದ ಪ್ರೊ. ಟಿ.ಎಸ್. ಹೂವಯ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು. ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ. ಪಿ, ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ. ಎಂ.ಎಂ. ರಜತ್ ಹೆಗಡೆ, ನಿವೃತ್ತ ಸಹ ಪ್ರಾದ್ಯಾಪಕರಾದ ಪ್ರೊ. ಆರ್.ಕೆ.ಬಾಳಿಗ, ಎಂ.ಬಿ.ಎ ವಿಭಾಗದ ನಿರ್ದೇಶಕರಾದ ಡಾ.ಸಿ.ಶ್ರೀಕಾಂತ್, ಸಹ ಪ್ರಾದ್ಯಪಕಾರಾದ ಅನುರಾಧ.ಸಿ.ಕೆ, ಡಾ. ಸಂತೋಷ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCE ShivamoggaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಜೆಎನ್‌ಎನ್‌ಸಿಇಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರ ಪೋಷಣೆ ಮಾಡಿ ಆಮ್ಲಜನಕ ಕೊರತೆ ನಿವಾರಿಸಿಕೊಳ್ಳಿ: ಕೆ.ಆರ್. ಸದಾಶಿವಯ್ಯ

Next Post

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಸಚಿವ ಅರವಿಂದ ಲಿಂಬಾವಳಿ

kalpa News

kalpa News

Next Post
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಸಚಿವ ಅರವಿಂದ ಲಿಂಬಾವಳಿ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಸಚಿವ ಅರವಿಂದ ಲಿಂಬಾವಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL