ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವ ಕೋವಿಡ್ ರೋಗಿಗಳ ಕುಟುಂಬ ಸದಸ್ಯರ ವಾಸ್ತವ್ಯಕ್ಕಾಗಿ ಆಸ್ಪತ್ರೆ ಆವರಣದಲ್ಲಿ ಸೇವಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.
ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾ ಭಾರತಿ ವತಿಯಿಂದ ಈ ಸೇವಾ ಕೇಂದ್ರವನ್ನು ಆರಂಭಿಸಿದ್ದು, ರೋಗಿಗಳ ಕುಟುಂಬಸ್ಥರ ವಾಸ್ತವ್ಯ ಹಾಗೂ ಅವರಿಗೆ ಅಗತ್ಯ ಇರುವ ಊಟೋಪಹಾರಕ್ಕೂ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಇದೇ ವೇಳೆ ನೋನಿ ಸಂಸ್ಥೆಯ ಶ್ರೀನಿವಾಸ್ ಅವರು, ಕೋವಿಡ್ ಪೀಡಿತರ ಸಹಾಯಕ್ಕಾಗಿ ಉಚಿತ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post