ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫುಟ್ ಪಾತ್ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸಮರ ಸಾರಿರುವ ಜಿಲ್ಲಾಡಳಿತ ಹಾಗೂ ಪಾಲಿಕೆ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ತೆರವು ಕಾರ್ಯಾಚರಣೆ ನಡೆಸಿತು.
ವಿಶೇಷವೆಂದರೆ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳ ಫುಟ್ ಪಾತ್ ತೆರವು ಕಾರ್ಯವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರುಗಳು ಖುದ್ಧು ಅಖಾಡಕ್ಕಿಳಿದಿದ್ದರು.

Also read: ಚುನಾವಣಾ ರಣಕಣಕ್ಕೆ ಎಂಟ್ರಿ ಕೊಟ್ಟ ಬಿಜೆಪಿ ಹೈಕಮಾಂಡ್ : ಹಾಲಿ ಶಾಸಕರಿಗೆ ಕೋಕ್ ಸಿಗುವ ಸಾಧ್ಯತೆ
ಗಾಂಧಿ ಬಜಾರ್ ಫುಟ್ ಪಾತ್ ಮೇಲೆ ವ್ಯಾಪಾರ ಮತ್ತು ಇತರೆ ಅಂಗಡಿಗಳಿಂದ ಅಧಿಕ ಒತ್ತುವರಿ ಆಗಿರುವುದರಿಂದ ಇದರಿಂದ ಬಹಳಷ್ಟು ತೊಂದರೆಯಾಗುತ್ತಿದ್ದು, ಕ್ರಮ ಕೈಗೊಳ್ಳಬೇಕು ಎಂದು ವರ್ತಕರ ಸಂಘದಿಂದ ಜಿಲ್ಲಾಧಿಕಾರಿಗೆ ದೂರು ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.












Discussion about this post