ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಯೋತ್ಪಾದಕ ತಾಣಗಳ ಮೇಲೆ ದಾಳಿ ಮಾಡಿ ಭಾರತದಲ್ಲಿ 26 ಸಹೋದರಿಯರ ಸಿಂಧೂರ ಅಳಿಸಿದ ಉಗ್ರರಿಗೆ ತಕ್ಕ ಪಾಠವನ್ನು ಭಾರತೀಯ ಸೇನೆ ಕಲಿಸಿದೆ ಎಂದು ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ #K E Kantesh ಹೇಳಿದ್ದಾರೆ.
ಅವರು ಇಂದು ದೇಶದ ಸೈನಿಕರ ಆಯಸ್ಸು ಆರೋಗ್ಯ ವೃದ್ಧಿಗಾಗಿ ಮತ್ತು ಶಕ್ತಿ ತುಂಬಲು ರವೀಂದ್ರನಗರ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ಸಾರ್ವಜನಿಕರಿಗೆ ಸಿಹಿ ಹಂಚಿ ಮಾತನಾಡಿದರು.

ಯೋಧರು ಮತ್ತು ಅವರ ಕುಟುಂಬಕ್ಕೆ ರಕ್ಷಣೆ ಸಿಗಬೇಕು. ದೇಶದ ಜನ ಶಾಂತಿಯಿಂದ ಬಾಳಬೇಕು. ದೇಶದ ಸೈನ್ಯಕ್ಕೆ ಶಕ್ತಿ ತುಂಬಬೇಕು ಎಂದು ದೇವರಲ್ಲಿ ಬೇಡಿಕೊಂಡಿದ್ದೇವೆ. ಅಖಂಡ ಭಾರತದ ಕನಸು ನನಸಾಗುವ ಸಂದರ್ಭ ಬಂದಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post