ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಮಾಯಕ ಭಾರತೀಯ ನಾಗರೀಕರ ಮೇಲೆ ನಡೆದ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಆಪರೇಷನ್ ಸಿಂಧೂರ #Operation Sindhura ಹೆಸರಿನಲ್ಲಿ ಕಳೆದ ರಾತ್ರಿ ಭಾರತೀಯ ಸೇನೆ ಪಾಕಿಸ್ಥಾನದ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ #Airstrike on Terror base in Pakistan ನಡೆಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಹೇಳಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಹೆಲ್ಗಾಮ್‌ನಲ್ಲಿ ಉಗ್ರರ ದಾಳಿಗೆ #Pehalgam Terror Attack 26 ಪ್ರವಾಸಿಗರು ಮೃತರಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕವಾಗಿ ನಿರ್ಬಂಧ ವಿಧಿಸಿತ್ತು. ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ #PM Narendra Modi ಹೇಳಿದ್ದರು. ಅದರಂತೆ ಮಧ್ಯರಾತ್ರಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದಲ್ಲಿರುವ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದರು.

ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಇದೆ. ಭಾರತದ ಸೈನಿಕರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಲಿದ್ದಾರೆ ಎಂಬ ಭರವಸೆ ಇದೆ. ನಿನ್ನೆಯ ದಾಳಿಯಲ್ಲಿ ಸುಮಾರು 50 ರಿಂದ 70 ಉಗ್ರರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಮುಗ್ಧ ಭಾರತೀಯರ ಬಲಿ ಪಡೆದ ಉಗ್ರರಿಗೆ ಇದು ತಕ್ಕ ಪ್ರತ್ಯುತ್ತರ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post