ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ JNNCE ಡಿ.3ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎಂಜಿನಿಯರಿಂಗ್ ವಿಭಾಗಗಳಿಗೆ ನೂತನವಾಗಿ ಪ್ರವೇಶಾತಿ ಪಡೆದಿರುವ, ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಓರಿಯಂಟೇಷನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಇಸ್ರೋ ಸಂಸ್ಥೆಯ ಸಂವಹನ ಮತ್ತು ನಿಯಂತ್ರಣಾ ಕೇಂದ್ರದ ಉಪ ನಿರ್ದೇಶಕಿ ಕೆ.ಎಲ್.ಶಿವಾನಿ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷಾದ ಜಿ.ಎಸ್.ನಾರಾಯಣ ರಾವ್, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದು, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿರುವರು.













Discussion about this post