No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತದ ಅನನ್ಯ ನೃತ್ಯ ಪ್ರಾಕಾರಗಳನ್ನು ಕಲಾರಸಿಕರಿಗೆ ಪರಿಚಯಿಸುವುದೇ ನಮ್ಮ ಗುರಿ: ಸಹನಾ ಚೇತನ್

ಇಂದಿನಿಂದ ಸಹಚೇತನದ ವತಿಯಿಂದ ನಾಟ್ಯಾರಾಧನಾ-11 ರಾಷ್ಟ್ರೀಯ ನೃತ್ಯ ಮಹೋತ್ಸವ

kalpa News by kalpa News
August 26, 2022
in ಶಿವಮೊಗ್ಗ
0
ಭಾರತದ ಅನನ್ಯ ನೃತ್ಯ ಪ್ರಾಕಾರಗಳನ್ನು ಕಲಾರಸಿಕರಿಗೆ ಪರಿಚಯಿಸುವುದೇ ನಮ್ಮ ಗುರಿ: ಸಹನಾ ಚೇತನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾಂಸ್ಕೃತಿಕತೆಯ ಪ್ರತಿಬಿಂಬವಾಗಿರುವ ಕರುನಾಡಿನಲ್ಲಿ ಭಾರತದ ಅನನ್ಯ ನೃತ್ಯ ಪ್ರಾಕಾರಗಳನ್ನು ಶಿವಮೊಗ್ಗೆಯ ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ನಗರದ ಸಹಚೇತನ ನಾಟ್ಯಾಲಯದ ಕಾರ್ಯ ವಿಭಿನ್ನವಾದದ್ದು. ಕಳೆದ ಹಲವಾರು ವರ್ಷಗಳಿಂದ ಶಿವಮೊಗ್ಗೆಯ ಕಲಾರಸಿಕರಿಗೆ ದೇಶವಿದೇಶದ ಕಲಾಪ್ರಾಕಾರಗಳನ್ನು ಪರಿಚಯಿಸಿರುವ ನೃತ್ಯ ಸಂಸ್ಥೆ ತಮ್ಮ ಮತ್ತೊಂದು ರಾಷ್ಟ್ರೀಯ ನೃತ್ಯ ಮಹೋತ್ಸವ ನಾಟ್ಯಾರಾಧನಾ-11ನ್ನು ಶಿವಮೊಗ್ಗೆಯ ಜನತೆಗೆ ಪರಿಚಯಿಸುತ್ತಿದೆ ಎಂದು ಸಂಸ್ಥೆಯ ನೃತ್ಯಗುರುಗಳಾದ ಸಹನಾ ಚೇತನ್ ಹೇಳಿದರು.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಬರುವ 26, 27 ಹಾಗೂ 28 ರಂದು ಮೂರು ದಿನಗಳ ಕಾಲ ಪ್ರತೀ ದಿನ ಸಂಜೆ 6.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಈ ನೃತ್ಯ ಮಹೋತ್ಸವ ಜರುಗಲಿದೆ. 26 ರ ಶುಕ್ರವಾರ ನಾಟ್ಯಾಲಯದ ಸಮಸ್ತ ವಿದ್ಯಾರ್ಥಿಗಳಿಂದ ಜಯ ಜಗನ್ಮಾತೃಕೆ ಎಂಬ ನೃತ್ಯ ರೂಪಕ ನಾಟ್ಯಾಲಯದ ನೃತ್ಯಗುರು ಸಹನಾ ಚೇತನ್‌ರವರ ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ ನಡೆಯಲಿದೆ. ಇದರ ಉದ್ಘಾಟನೆಯನ್ನು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ನಗರದ ಶಾಸಕರಾದ ಸನ್ಮಾನ್ಯ ಕೆ.ಎಸ್. ಈಶ್ವರಪ್ಪನವರು ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್. ಉಮೇಶ್ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಸುಮಾರು 131 ಶಿಷ್ಯಂದಿರು ಈ ವೇದಿಕೆಯಲ್ಲಿ ಹೆಜ್ಜೆ ಹಾಕಲಿದ್ದಾರೆ ಎಂದರು.
ಆ.27ರ ಶನಿವಾರ ಭರತನಾಟ್ಯ ಕ್ಷೇತ್ರದ ಖ್ಯಾತನಾಮರಾದ ಪಾರ್ಶ್ವನಾಥ್ ಎಸ್. ಉಪಾಧ್ಯೆ ತಮ್ಮ ಅತ್ಯಂತ ವೈಶಿಷ್ಠ್ಯಪೂರ್ಣ ರಾಮಾಯಣದ ಮರುಚಿತ್ರಣದ ಅಡಿಯಲ್ಲಿ ರೂಪುಗೊಂಡ ನೃತ್ಯ ರೂಪಕವಾದ ಆಭಾ(ಸೀತೆ)ಯನ್ನು ತಮ್ಮ ಸಹಕಲಾವಿದರಾದ ಶ್ರೀಮತಿ ಶೃತಿ ಗೋಪಾಲ್ ಹಾಗೂ ಆದಿತ್ಯ ಪಿ.ವಿ.ಯವರ ಜೊತೆಗೂಡಿ ಪ್ರಸ್ತುತ ಪಡಿಸಲಿದ್ದಾರೆ. ದೇಶ ವಿದೇಶಗಳೆಲ್ಲೆಡೆಯಲ್ಲೂ ಇದರ ಟಿಕೆಟ್ ಶೋಗಳಾಗಿ ಪ್ರತಿ ಶೋ ಹೌಸ್‌ಫುಲ್ ಆಗಿ ಹೊರಹೊಮ್ಮಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಆದರೆ ಶಿವಮೊಗ್ಗೆಯ ಕಲಾಸ್ವಾದಕರಿಗಾಗಿ ಉಚಿತ ಪ್ರದರ್ಶನವನ್ನು ಸಹಚೇತನ ಏರ್ಪಡಿಸಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸದರಾದ ಬಿ.ವೈ. ರಾಘವೇಂದ್ರರವರು ಆಗಮಿಸಿ ಕಲಾವಿದರನ್ನು ಸನ್ಮಾನಿಸಲಿದ್ದಾರೆ. ಜೊತೆಗೆ ಛೇಂಬರ್ ಆಫ್ ಕಾಮರ್ಸ್’ನ ಅಧ್ಯಕ್ಷರಾದ ಎನ್. ಗೋಪಿನಾಥ್ ಕೂಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಿದ್ದಾರೆ ಎಂದು ಹೇಳಿದರು.
ಸಂಸ್ಥೆಯ ಗೌರವಾಧ್ಯಕ್ಷರಾದ ಎಸ್. ಎನ್. ಚನ್ನಬಸಪ್ಪ (ಚನ್ನಿ) ಮಾತನಾಡಿ 28 ರ ಭಾನುವಾರ ನಾಟ್ಯಾಲಯದ ನೃತ್ಯಗುರು ಸಹನಾ ಚೇತನ್‌ರವರ ಏಕವ್ಯಕ್ತಿ ನೃತ್ಯ ರೂಪಕ ಬ್ರಹ್ಮಜ್ಞಾನ ಜಿಜ್ಞಾಸು ಮೈತ್ರೇಯಿ ಪ್ರಸ್ತುತಗೊಳ್ಳಲಿದೆ. ತದನಂತರ ನಾಟ್ಯಾಲಯದ ಹಿರಿಯ ವಿದ್ಯಾರ್ಥಿಗಳೊಡಗೂಡಿ ಓಂ ನಮಃ ಶಿವಾಯ ಎಂಬ ನೃತ್ಯರೂಪಕವನ್ನು ಸಾದರಪಡಿಸಲಿದ್ದಾರೆ. ಈ ಕಾರ್ಯಕ್ರಮದ ಸಮಾರೋಪಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಹಾಗೂ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ ಪಿ. (ಪ್ರಭು) ಭಾಗವಹಿಸಲಿದ್ದಾರೆ ಎಂದರು.

Also read: ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!

ವಿಶೇಷವೆಂಬಂತೆ ಮಹಿಳೆಯರ ಸ್ವಾವಲಂಬಿ ಜೀವನವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ವೇದ ಸಂಸ್ಥೆಯ ವತಿಯಿಂದ ಹೊಯ್ಸಳ ಕರ್ನಾಟಕ ಸೌಹಾರ್ದ ಸಹಕಾರಿ ಸಂಸ್ಥೆ ಹಾಗೂ ಶುಭಂ ಸೌಹಾರ್ದ ಸಹಕಾರಿ ಸಂಸೆಗಳ ಸಹಯೋಗದಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಈ ಎಲ್ಲಾ ಕಾರ್ಯಕ್ರಮಕ್ಕೆ. ಸಂಸ್ಥೆಯ ಅಧ್ಯಕ್ಷರಾದ ಎನ್.ಆರ್. ಪ್ರಕಾಶ್(ಆಚಿ) ಉಪಸ್ಥಿತರಿರಲಿದ್ದಾರೆ ಎಂದರು.
ಭಾರತೀಯ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪಸರಿಸುವ ನಿಟ್ಟಿನಲ್ಲಿ ಸಹಚೇತನ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಲಾರಸಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಸ್.ಎನ್. ಚನ್ನಬಸಪ್ಪ (ಚನ್ನಿ)ಕೋರಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಸಹನಾ ಚೇತನ್, ಚೇತನ್, ಹರೀಶ್ ಕಾರ್ಣಿಕ್, ಮಾಲತೇಶ್, ಆನಂದ್ ರಾಮ್, ದಿನೇಶ್ ಆಚಾರ್ಯ, ಸಿಂಧು, ಸ್ನೇಹ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!

Next Post

ಯುವ ಸಮೂಹದ ನಾವಿನ್ಯತೆಗಳಿಂದ ಭಾರತ ವಿಶ್ವಗುರುವಾಗಲಿದೆ : ಪ್ರೊ.ಬಿ.ಪಿ. ವೀರಭದ್ರಪ್ಪ

kalpa News

kalpa News

Next Post
ಯುವ ಸಮೂಹದ ನಾವಿನ್ಯತೆಗಳಿಂದ ಭಾರತ ವಿಶ್ವಗುರುವಾಗಲಿದೆ : ಪ್ರೊ.ಬಿ.ಪಿ. ವೀರಭದ್ರಪ್ಪ

ಯುವ ಸಮೂಹದ ನಾವಿನ್ಯತೆಗಳಿಂದ ಭಾರತ ವಿಶ್ವಗುರುವಾಗಲಿದೆ : ಪ್ರೊ.ಬಿ.ಪಿ. ವೀರಭದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL