ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ವಿದ್ಯಾಸಂಸ್ಥೆಗಳು ನೀಡಬೇಕಿದೆ ಎಂದು ಬೆಂಗಳೂರು ಐಐಎಂ ನಿವೃತ್ತ ಪ್ರಾಧ್ಯಾಪಕ ಡಾ.ಆರ್. ವೈದ್ಯನಾಥನ್ ಹೇಳಿದರು.
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ #JNNCE ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಸಂಘದ ಬೆಂಗಳೂರಿನ ಸಮಿತಿಯ ಸಹಯೋಗದಲ್ಲಿ ಶನಿವಾರ ಬೆಂಗಳೂರಿನ ಆರ್.ವಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ‘ನೆನಪಿನ ಅಂಗಳ – 2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Also read: ಲೈಂಗಿಕ ದೌರ್ಜನ್ಯ ಕೇಸ್ | ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಮಂಜೂರು
ಪ್ರತಿಯೊಬ್ಬ ಭಾರತೀಯ ಮಹಿಳೆಯರು ಶ್ರೇಷ್ಟ ಅರ್ಥಶಾಸ್ತ್ರಜ್ಞರು. ಉಳಿತಾಯ ಮತ್ತು ಹೂಡಿಕೆಯ ಕುರಿತಾಗಿ ಅವರಲ್ಲಿರುವ ಜ್ಞಾನವು ಗೃಹಿಣಿಯರನ್ನು ಶ್ರೇಷ್ಟತೆಯ ಸಾಲಿಗೆ ಸೇರಿಸಿದೆ ಎಂದು ಹೇಳಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಿಂಗಾಪುರ್ ಕ್ಸೆರೋಲಾಜಿಕಲ್ ಇಂಟರ್ನ್ಯಾಷನಲ್ ಕಂಪನಿ ಸ್ಥಾಪಕ ಶ್ರೀರಾಮ ಸುಬ್ಬರಾವ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿದರು.

ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಾ.ಕೆ.ಎಂ.ಬಸಪ್ಪಾಜಿ, ಕಾರ್ಯದರ್ಶಿ ಡಾ.ಎಸ್.ವಿ.ಸತ್ಯನಾರಾಯಣ, ಸಹ ಕಾರ್ಯದರ್ಶಿ ಸರ್ಜಾ ಸತ್ಯೋದಯ, ಎಂ.ಡಿ. ಸುನಿಲ್, ಬೆಂಗಳೂರು ಸಮಿತಿಯ ಅಧ್ಯಕ್ಷರಾದ ಡಾ.ಜಿ.ಆರ್. ಮಂಜುನಾಥ, ಸದಸ್ಯರಾದ ಅನಂತಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post