ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಬಿಟ್ಟಿರುವ ಕಾರಣ ನಗರದ ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಮುಳುಗಡೆಯಾಗಿದೆ.
ತುಂಗಾ ಜಲಾನಯನ ಪ್ರದೇಶದಲ್ಲಿ ನಿರಂತರಾಗಿ ಮಳೆಯಾಗುತ್ತಿದ್ದು, ಪರಿಣಾಮವಾಗಿ ಅಣೆಕಟ್ಟೆಯಲ್ಲಿನ ನೀರು ಗರಿಷ್ಠ ಮಟ್ಟ ತಲುಪಿದೆ. ಸೋಮವಾರ ಮಧ್ಯಾಹ್ನದ ಮಾಹಿತಿ ಅನುಸಾರ, ಡ್ಯಾಂಗೆ 67,275 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳ ಹರಿವಿನಷ್ಟೆ ನೀರನ್ನು ಡ್ಯಾಂನಿಂದ ಹೊರ ಬಿಡಲಾಗಿದೆ.
ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ತುಂಬಿದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗಿದೆ. ಪರಿಣಾಮವಾಗಿ ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಮುಳುಗಿದ ಮಂಟಪ
ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದ್ದು, ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ, ನಗರದ ಕೋರ್ಪಳಯ್ಯನ ಛತ್ರದ ಬಳಿಯಿರುವ ಐತಿಹಾಸಿಕ ಮಂಟಪ ಮುಳುಗಡೆಯಾಗಿದೆ.
Also read: ಮಲೆನಾಡಲ್ಲಿ ಮಳೆಯ ಅಬ್ಬರ: ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದಾಳೆ ತುಂಗೆ
ಮಂಟಪ ಮುಳುಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸಿ ತುಂಗೆಯ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post