ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದಾದ್ಯಂತ ಆಕ್ಸಿಜನ್ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ವಿಐಎಸ್’ಎಲ್ ಆವರಣದಲ್ಲಿ ಈಗಾಗಲೇ ಇರುವ ಆಕ್ಸಿಜನ್ ಪ್ಲಾಂಟ್’ನ್ನು ಬಳಕೆ ಮಾಡಿಕೊಂಡು ಕೊರತೆಯನ್ನು ನೀಗಿಸುವ ಉದ್ದೇಶ ಹೊಂದಿದ್ದೇವೆ. ಈ ಹಿನ್ನೆಲೆಯಲ್ಲಿ ಸಚಿವ ಶೆಟ್ಟರ್ ಅವರು ನಾಳೆ ಭದ್ರಾವತಿಯಲ್ಲಿನ ಪ್ಲಾಂಟ್’ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯಾವ ರೀತಿಯಲ್ಲಿ ಇದರ ಬಳಕೆ ಮಾಡಿಕೊಳ್ಳಬಹುದು ಎಂಬುದನ್ನು ಚರ್ಚಿಸಲಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post