ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಹೊಸ ಮನೆ ಬಡಾವಣೆಯಲ್ಲಿ ಇಂದು ಬೆಳಗ್ಗೆ ವಾರ್ಡಿನ ಜನತೆಗೆ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಥಮಿಕ ಹಂತದಲ್ಲಿ ಆರೋಗ್ಯದ ಕಡೆ ಗಮನಹರಿಸಿ ಭಯಪಡದೆ ಜಾಗೃತರಾಗಿ ಕೊರೋನ ಗೆಲ್ಲಲು “ನಮ್ಮ ಆರೋಗ್ಯ ನಮ್ಮ ಕೈಯಲ್ಲಿ” ಎಂಬಂತೆ ದೇಹದ ಆಮ್ಲಜನಕದ ಸ್ಥಿತಿಯನ್ನು ತಿಳಿದುಕೊಂಡು ಜಾಗೃತರಾಗಲು ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಆಕ್ಸಿಮೀಟರ್ ಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಪಿ. ಗಿರೀಶ್ , ಹೊಸಮನೆ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ವಿ. ಶರತ್, ಬಡಾವಣೆಯ ಕೆ.ಆರ್ ಸುರೇಶ್ , ಸತೀಶ ಚಿನ್ನು, ಶಿವು, ಕಿರಣ , ಪಾರ್ಥ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















