ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ ಪ್ರತಿಷ್ಠಿತ ಪೇಸ್ ಕಾಲೇಜಿನ ನಾಲ್ವರು ಪ್ರತಿಭಾನ್ವಿತ ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ ವಿ. ಶರ್ಮಾ, ಪನ್ನಗರಾಮ್ ಪಿ.ಆರ್., ಪ್ರಜ್ವಲ್ ಆರ್. ಛಾತ್ರಾ ಹಾಗೂ ಮೋನಿಷಾ ಡಿ.ಎಸ್. ಅವರುಗಳು 600ಕ್ಕೆ 600 ಅಂಕ ಗಳಿಸುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರಜ್ಞಾ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆ.ಎಸ್. ಈಶ್ವರಪ್ಪ, ಖಜಾಂಚಿಗಳಾದ ಕೆ.ಈ. ಕಾಂತೇಶ್, ಉಪಾಧ್ಯಕ್ಷರಾದ ಪ್ರೊ. ಎಚ್. ಆನಂದ್, ಪ್ರಾಂಶುಪಾಲರಾದ ಪ್ರೊ. ಬಿ.ಎನ್. ವಿಶ್ವನಾಥಯ್ಯ ಸೇರಿದಂತೆ ಪ್ರಮುಖರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post