ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಯೋತ್ಪಾದಕರ ದಾಳಿಗೆ #Pahalgam Terrorist Attack ಬಲಿಯಾದ ಶಿವಮೊಗ್ಗದ ಮಂಜುನಾಥ್ #Manjunath Rao of Shivamogga ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಸಂಸದ ರಾಘವೇಂದ್ರ, #MP Raghavendra ಸಚಿವ ಮಧುಬಂಗಾರಪ್ಪ #Minister Madhu Bangarappa ಸೇರಿದಂತೆ ಹಲವು ರಾಜಕೀಯ ಗಣ್ಯರು ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಇಂದು ಬೆಳಗಿನಿಂದಲೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮೊದಲಾದ ರಾಜಕೀಯ ಮುಖಂಡರು, ಅಧಿಕಾರಿಗಳು ಮಂಜುನಾಥ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಭಯೋತ್ಪಾದಕರ ದಾಳಿಯಲ್ಲಿ ಮೂವರು ಕನ್ನಡಿಗರು ಬಲಿಯಾಗಿದ್ದು, ಅವರ ಮೃತದೇಹಗಳನ್ನು ತರಲು ಹಾಗೂ ಗಾಯಾಳುಗಳ ಚಿಕಿತ್ಸೆಗೆ, ಅಲ್ಲಿಗೆ ತೆರಳಿರುವ ಕನ್ನಡಿಗರ ರಕ್ಷಣೆಯಾಗಿ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಸರ್ಕಾರ ಕಳುಹಿಸಿದ್ದು, ಸಚಿವ ಸಂತೋಷ್ ಲಾಡ್ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದೇನೆ ಎಂದರು.
ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ನಮ್ಮ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು ಉಗ್ರರ ಗುಂಡೇಟಿಗೆ ಬಲಿಯಾದ ಸಂಗತಿ ಅತ್ಯಂತ ದುಃಖಕರವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದು, ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.
ಮೃತ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರೊಂದಿಗೆ ಈಗಾಗಲೇ ದೂರವಾಣಿ ಮೂಲಕ ಮಾತನಾಡಿ, ಅಲ್ಲಿನ ಗಂಭೀರ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ನೆರವಿನ ಭರವಸೆ ನೀಡಿ ಧೈರ್ಯ ಹೇಳಿದ್ದೇನೆ. ಇಂತಹ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರ ದಾಳಿಗೆ ಪ್ರಾಣ ಕಳೆದುಕೊಂಡ ಮಂಜುನಾಥ್ ಅವರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬ ವರ್ಗದವರಿಗೆ ಹಾಗೂ ಸಂಬಂಧಿಕರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

ಶಿವಮೊಗ್ಗ: ಮೃತ ಮಂಜುನಾಥ್ ಮನೆಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ನೀಡಿ ಮಂಜುನಾಥ ಮೃತದೇಹ ಶಿವಮೊಗ್ಗಕ್ಕೆ ಕರೆ ತರುವ ವಿಚಾರವಾಗಿ ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು.
ಮಂಜುನಾಥ್ ಅವರ ಪಾರ್ಥಿವ ಶರೀರ ನಾಳೆ ಮುಂಜಾನೆ ಶಿವಮೊಗ್ಗ ತಲುಪುವ ನಿರೀಕ್ಷೆ ಇದೆ. ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಮಾತನಾಡಿದ್ದೇನೆ. ಶಿವಮೊಗ್ಗಕ್ಕೆ ಪಾರ್ಥಿವ ಶರೀರ ಬಂದ ಮೇಲೆ ಹೇಗೆ ಮುಂದಿನ ಕೆಲಸ ಮಾಡಬೇಕು. ಮೆರವಣಿಗೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ಅವರ ಕುಟುಂಬದವರೊಂದಿಗೆ ಚರ್ಚಿಸುತ್ತೇವೆ. ಮತ್ತು ಶ್ರದ್ಧಾಂಜಲಿ ಸಭೆ ಕೂಡ ಇರುತ್ತದೆ ಎಂದರು.
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಾಂತ್ವಾನ
ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಂಜುನಾಥ್ ತಾಯಿ ಸೇರಿದಂತೆ ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಎಲ್ಲರಿಗೂ ನೋವು ಆಗಿದೆ. ಈಗಾಗಲೇ ರಾಜ್ಯದ ಮೂವರು ಸಾವು ಆಗಿದೆ. ಕೇಂದ್ರ ಸರಕಾರ ಭಯೋತ್ಪಾದಕ ರ ವಿರುದ್ದ. ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಭಯೋತ್ಪಾದಕ ಚಟುವಟಿಕೆ ಇದ್ದರೂ. ಯಾಕೆ ಅಲ್ಲಿ ಪ್ರವಾಸಿಗರನ್ನು ಬಿಟ್ಟಿದ್ದು. ಕೇಂದ್ರ ಸರಕಾರದ ಸತ್ತ ಮೇಲೆ ನಾವೂ ಬಿಡುವುದಿಲ್ಲ ಅಂತಾ ಹೇಳುವುದಲ್ಲಿ ಯಾವುದೇ ಅರ್ಥ ಇಲ್ಲ. ಪ್ರತಿ ಇಂತಹ ಭಯೋತ್ಪಾದಕ ಚಟುವಟಿಕೆ ನಡೆದಾಗ ಇಂತಹ ಕೇಂದ್ರ ನಾಯಕರ ಹೇಳಿಕೆಗೆ ಬೇಳೂರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರಕಾರದ ಮೃದುಧೋರಣೆ ಈ ಘಟನೆಗೆ ಕಾರಣ ಆಗಿದೆ. ಕಾಶ್ಮೀರ ದಲ್ಲಿ ಕಠಿಣ ಕ್ರಮಕ್ಕೆ ಎರಡು ಸರ್ಕಾರ ಮುಂದಾಗಬೇಕು. ಜಮ್ಮು ಕಾಶ್ಮೀರ ದ ಪೂರ್ಣ ಅಧಿಕಾರ ಕೇಂದ್ರ ಕೈಯಲ್ಲಿ ಇದೆ. ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರ ಅಲ್ಲಿ ಇಲ್ಲ ಎಂದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಮಾನವ ಸಮಾಜ ತಲೆ ತಗ್ಗಸುವಂತಹ ಘಟನೆ ಇದು. ಮಂಜುನಾಥ್ ಕುಟುಂಬದವರ ಜೊತೆ ನಾವೆಲ್ಲಾ ಇದ್ದೇವೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post