ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಪದವೀಧರ ಕ್ಷೇತ್ರ #Southwestern Graduate Constituency ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಮತದಾರರ ಸಭೆ ಶುಕ್ರವಾರ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಮತಯಾಚನೆ ಮಾಡಿದರು.
ಸಭೆಯಲ್ಲಿ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಜೀ, ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಮಾಲತೇಶ್, ಹಿರಿಯ ಮುಖಂಡರಾದ ಶಿವನಂಜಪ್ಪ, ಮಹಾಶಕ್ತಿ ಅಧ್ಯಕ್ಷರಾದ ಅಜಯ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post