ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಶಿಕ್ಷಕನಾಗಿರುವ ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡಬೇಕು ಎಂದು ಅಭ್ಯರ್ಥಿ ಡಾ. ನರೇಶ್ಚಂದ್ ಹೆಗ್ಡೆ ಮನವಿ ಮಾಡಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೈರುತ್ಯ ಶಿಕ್ಷಕರ ಕ್ಷೇತ್ರ ರಚನೆಯಾದ ಬಳಿಕ ರಾಜಕಾರಣಿಗಳು, ಶಿಕ್ಷಕರಲ್ಲದವರು, ಕೆಲವೊಂದು ಸಂದರ್ಭಗಳಲ್ಲಿ ಪದವಿಯನ್ನೇ ಪಡೆಯದವರು ಚುನಾಯಿತರಾಗುತ್ತಿರುವುದು ವಿಪರ್ಯಾಸ. ಈ ಕ್ಷೇತ್ರಕ್ಕೆ ಓರ್ವ ವಿದ್ಯಾವಂತ ಮತ್ತು ಶಿಕ್ಷಕನೇ ಆಗಿರುವ ಅಭ್ಯರ್ಥಿಯೇ ಬೇಕು ಎಂಬ ಪರಿಕಲ್ಪನೆಯಡಿ ಹೃದಯ ಶಸ್ತ್ರಚಿಕಿತ್ಸಾ ತಜ್ಞ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ ನಾನು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದರು.

Also read: ಅಂದು ಈಶ್ವರಪ್ಪರ ರಾಜೀನಾಮೆಗೆ ಆಗ್ರಹಿಸಿದ್ದ ಸಿದ್ದರಾಮಯ್ಯ ಈಗೇಕೆ ಸುಮ್ಮನಿದ್ದಾರೆ? ಕೆಬಿಪಿ ಕಿಡಿ
ವೈದ್ಯಕೀಯ ಮತ್ತು ಶೈಕ್ಷಣಿಕ ಹಿನ್ನಲೆ ಹೊಂದಿರುವ ನಾನು ಇದೀಗ ಶಿಕ್ಷಕ ರಂಗದ ಸೇವಾಕಾಂಕ್ಷಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಶಿಕ್ಷಕರು ಮತ ನೀಡುವುದರ ಮೂಲಕ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಅಮಿತಾ ಹೆಗ್ಡೆ, ಶಶಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post