ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಸರ್ಕಾರ ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ನಾಯಕತ್ವ ಉತ್ತೇಜಿಸುವ ನಿಟ್ಟಿನಲ್ಲಿ ಸಂಸತ್ ಖೇಲ್ ಮಹೋತ್ಸವ -2025 ಎಂಬ ಯೋಜನೆಯನ್ನು ಸಿದ್ಧಪಡಿಸಿದ್ದು, ಇದರ ಲಾಂಛನವನ್ನು ಆ. 29ರಂದು ಬೆಳಗ್ಗೆ 10.30ಕ್ಕೆ ನಗರದ ನೆಹರು ಕ್ರೀಡಾಂಗಣದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋದಿ ಅವರು ಪ್ರಧಾನಮಂತ್ರಿಯಾದ ಮೇಲೆ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. 2019ರ ಆ. 29ರಂದು ಫಿಟ್ ಇಂಡಿಯಾ ಚಳವಳಿಗೆ ಚಾಲನೆ ನೀಡಿದ್ದರು. ಆ ದಿನ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಪಡೆದ ಶ್ರೀ ಧ್ಯಾನಚಂದ್ ಅವರ ಜನ್ಮ ದಿನವೂ ಆಗಿದೆ. ಹಾಗಾಗಿ ನಾಳೆ ಮಹೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಲಾಗುವುದು ಎಂದರು.

ಈ ನೋಂದಣಿಯನ್ನು ಆನ್ ಲೈನ್ ಪೋರ್ಟಲ್‌ನಲ್ಲಿ ಅಥವಾ ಸಂಸದರ ಶಿವಮೊಗ್ಗದ ಕಚೇರಿಯಲ್ಲಿ ಮಾಡಿಸಿಕೊಳ್ಳಬಹುದು. ಪಿಯುಸಿ ನಂತರದ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಬಹುದು. ಈ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಕ್ರೀಡಾ ವಿದ್ಯಾರ್ಥಿ ವೇತನ, ಹಣಕಾಸು ನೆರವು, ಮಾರ್ಗದರ್ಶನ, ತರಬೇತಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ನೀಡುವ ಅವಕಾಶ ಕ್ರೀಡಾ ನಾಯಕತ್ವ, ವಿಜೇತರನ್ನು ನಮೋ ಫಿಟ್ ಇಂಡಿಯಾ ನಾಯಕರನ್ನಾಗಿ ಮಾಡಲಾಗುವುದು ಎಂದರು.

2030ಕ್ಕೆ ಕಾಮನ್ ವೆಲ್ತ್ ಕ್ರೀಡಾಕೂಟ ಹಾಗೂ 2036ಕ್ಕೆ ಒಲಿಂಪಿಕ್ ಕ್ರೀಡಾಕೂಟ ಭಾರತದಲ್ಲಿಯೇ ನಡೆಸಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯುವ ಕ್ರೀಡಾಪಟುಗಳನ್ನು ಹುಡುಕುವ, ಗುರುತಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ಸಂಸತ್ ಖೇಲ್ ಮಹೋತ್ಸವ -2025 ಸಜ್ಜಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಹರಿಕೃಷ್ಣ, ಸುದರ್ಶನ್, ಚಂದ್ರಶೇಖರ್, ರಾಘವೇಂದ್ರ, ಕೆ.ವಿ. ಅಣ್ಣಪ್ಪ,. ದರ್ಶನ್ ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post