ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕೆ ಜನರ ಸಹಕಾರ ಅತಿಮುಖ್ಯವಾಗಿದ್ದು, ಸರ್ಕಾರದೊಂದಿಗೆ ಜನರು ಸಹಕಾರ ನೀಡಬೇಕು ಎಂದು ಜಿಪಂ ಸದಸ್ಯ ಕೆ.ಇ. ಕಾಂತೇಶ್ ಹೇಳಿದರು.
ಕೋಟೆ ಪ್ರದೇಶದಲ್ಲಿ ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾ ಭಾರತಿ ವತಿಯಿಂದ ಸ್ಯಾನಿಟೈಸೇಶನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೇಂದ್ರದಲ್ಲಿ ಪಾಲಿಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೆ, ಸೋಂಕು ಹರಡುವುದನ್ನು ತಡೆಯುವಲ್ಲಿ ಜನರ ಪಾತ್ರ ಅತಿಮುಖ್ಯವಾದುದು. ಇದನ್ನು ಅರ್ಥ ಮಾಡಿಕೊಂಡು ಸಾರ್ವಜನಿಕರು ಅನಾವಶ್ಯಕವಾಗಿ ಮನೆಗಳಿಂದ ಹೊರಗೆ ಬಾರದೆ ಸುರಕ್ಷಿತವಾಗಿರಬೇಕು ಎಂದು ಕರೆ ನೀಡಿದರು.
ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾಭಾರತಿ ವತಿಯಿಂದ ಪಾಲಿಕೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಕೋಟೆ ಪ್ರದೇಶದಲ್ಲಿ ಈ ಕಾರ್ಯ ಇಂದಿನಿಂದ ಆರಂಭವಾಗಿದೆ.
ಈ ಸಂದರ್ಭದಲ್ಲಿ ಬಜರಂಗದಳದ ದೀನ ದಯಾಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post