ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎನ್‍ಹೆಚ್‍ಎಂ (ರಾಷ್ಟ್ರೀಯ ಆರೋಗ್ಯ ಅಭಿಯಾನ) ಸಿಬ್ಬಂದಿಗಳನ್ನು ಕಾಯಂಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘ ಇಂದು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿತು.
ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರು ಕೆಲಸ ಖಾಯಂಗೊಳಿಸುವಂತೆ ಮುಷ್ಕರ ನಡೆಸುತ್ತ ಬಂದಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನೋಟೀಸ್ ನೀಡಲು ಮುಂದಾಗಿರುವುದು ಸರಿಯಲ್ಲ. ಕಾನೂನಿನಲ್ಲಿ ಹೊರಗುತ್ತಿಗೆ ಮತ್ತು ಗುತ್ತಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅವಕಾಶವಿದೆ ಎಂದಾದರೆ ಯಾಕೆ ಮೀನಾಮೇಷ ಎಣಿಸಬೇಕು. ಆದ್ದರಿಂದ ನಾವು ಪ್ರತಿಭಟನೆಯನ್ನು ಆರಂಭಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
Also read: ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಿ | ಅಧಿಕಾರಿಗಳ ಸಮಜಾಯಿಷಿಗೆ ಸಚಿವ ಮಧುಬಂಗಾರಪ್ಪ ಗರಂ
ಕೆಲಸ ಕಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಯಾಗಬೇಕು. ಆರೋಗ್ಯ ವಿಮೆ ಜಾರಿಯಾಗಬೇಕು. ಮೂಲ ವೇತನ ಪರಿಷ್ಕರಣೆ ಮಾಡಬೇಕು. ಟರ್ಮ್ ವಿಮೆ ಜಾರಿಮಾಡಬೇಕು. ಪ್ಯಾರಾ ಮೆಡಿಕಲ್ ವಿಶೇಷ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಾಕಿ ಉಳಿದ ಹಣವನ್ನು ತಕ್ಷಣ ನೀಡಿ ಶೇ.15ರಷ್ಟು ವೇತನ ಹೆಚ್ಚಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post