ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂ.ಗೆ ಏರಿಕೆಯಾಗಿರುವುದು ಖಂಡಿಸಿ, ಜಾಗಟೆ ಬಾರಿಸಿ, ಸಿಹಿ ಹಂಚಿ ಅಣಕು ಸಂಭ್ರಮಾಚರಣೆ ಮೂಲಕ ದೇಶಾದ್ಯಂತ ಪೆಟ್ರೋಲ್ ದರ ಏರಿಕೆ ಆಗಿರುವುದಕ್ಕೆ ಪ್ರತಿಭಟಿಸಿದರು.
ನಗರದಲ್ಲಿ ಇಂದು ಪೆಟ್ರೋಲ್ ಬಂಕ್ ಮುಂಭಾಗ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಟ್ಟೆ ಜಾಗಟೆ ಶಂಕುಗಳನ್ನು ಬಾರಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮುಖಾಂತರ ಅಣಕು ಸಂಭ್ರಮಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಮಹಾನಗರ ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ಗಾಮಾಂತರ ಅಧ್ಯಕ್ಷ ಈಟಿ ನಿತಿನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್‌ನ ಎಸ್. ಕುಮಾರೇಶ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಆರ್. ಕಿರಣ್ , ಟಿವಿ ರಂಜಿತ್, ಪದಾಧಿಕಾರಿಗಳಾದ ಎಂ. ರಾಹುಲ್, ಸಂದೀಪ್ ಮೊದಲಿಯಾರ್, ವೆಂಕಟೇಶ್ ಕಲ್ಲೂರು, ಪವನ್, ರಾಕೇಶ್, ವಿ. ಶರತ್, ಗೋವಿಂದ ವರ್ಮ, ಪ್ರಜ್ವಲ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post