ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಇಂಗ್ಲೀಷ್ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಅವರಿಗೆ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾಲಯ ಪಿ ಹೆಚ್ ಡಿ ಪದವಿ ಪ್ರದಾನ ಮಾಡಿದೆ
ಗಣೇಶ್ ಪ್ರಸಾದ್ ಅವರು ಹರಿಹರದ ಬಿ. ವೈ. ಪಾಟೀಲ್ ಅವರ ಮಾರ್ಗದರ್ಶನದಲ್ಲಿ “ಬೂಕರ್ ಪುರಸ್ಕೃತ ಭಾರತೀಯ ಇಂಗ್ಲಿಷ್ ಕಾದಂಬರಿಗಳಲ್ಲಿ ಭಾರತದ ಚಿತ್ರಣ” ಎಂಬ ಮಹಾ ಪ್ರಬಂಧವನ್ನು ಮಂಡಿಸಿದ್ದರು.
ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ. ರಜನಿ ಪೈ, ಡಾ.ಪ್ರೀತಿ ಶಾನಭಾಗ್, ಡಾ. ವಾಮನ್ ಶಾನ್ ಭಾಗ್, ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ. ರಾಜೇಂದ್ರ ಚೆನ್ನಿ, ಆಡಳಿತಾಧಿಕಾರಿ ಪ್ರೊ. ರಾಮಚಂದ್ರ ಬಾಳಿಗಾ ಗಣೇಶ ಪ್ರಸಾದ್ ಅವರನ್ನು ಅಭಿನಂದಿಸಿದ್ದಾರೆ. ಅವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಧ್ಯಾ ಕಾವೇರಿ, ವಿಭಾಗದ ಮುಖಸ್ಥರಾದ ರೇಷ್ಮಾ, ಸಿಬ್ಬಂದಿ ಮಿತ್ರರು, ವಿದ್ಯಾರ್ಥಿಗಳು ಶುಭಾಶಯ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















