No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಸ್ತೂರಿರಂಗನ್ ವರದಿ ಜಾರಿ ಮುನ್ನ ಮಲೆನಾಡಿನಲ್ಲಿ ಸಮಗ್ರ ಭೌತಿಕ ಸಮೀಕ್ಷೆ ನಡೆಸಿ: ಸಂಸದ ರಾಘವೇಂದ್ರ

kalpa News by kalpa News
September 16, 2026
in ಶಿವಮೊಗ್ಗ
0
Shivamogga Physical Survey Before Kasturirangan Report
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಸ್ತೂರಿರಂಗನ್ ವರದಿಯನ್ನು (Kasturirangan Report) ಜಾರಿಗೆ ತರುವ ಮುನ್ನ ಮಲೆನಾಡು ಭಾಗದಲ್ಲಿ ಸಮಗ್ರ ಭೌತಿಕ ಸಮೀಕ್ಷೆ ನಡೆಸಬೇಕು ಎಂದು (Shivamogga) ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರೈತರ ಜಮೀನು, ಸರ್ವೇ ನಂಬರ್, ಕೃಷಿ ಪ್ರದೇಶ, ಅರಣ್ಯ ಮತ್ತು ಕಂದಾಯ ಭೂಮಿಯ ವಾಸ್ತವ ಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ವೈಜ್ಞಾನಿಕವಾಗಿ ಗಡಿ ಗುರುತಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದರು.

ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ಜನರಲ್ಲಿ ಅನಗತ್ಯ ಆತಂಕ ಮೂಡಿಸುವ ಬದಲು ವಾಸ್ತವಾಂಶಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಜಾರಿಗೆ ಸಂಬAಧಿಸಿದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದಲ್ಲಿ ರೈತರ ಜಮೀನು, ಕೃಷಿ ಪ್ರದೇಶ, ಜನವಸತಿ ಮತ್ತು ಅರಣ್ಯ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ಗುರುತಿಸುವ ಅಗತ್ಯವಿದೆ ಎಂದು ಅವರು ಹೇಳಿದರು.PES Shivamogga

ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ಅಗತ್ಯ

ಕೇರಳದಲ್ಲಿ ಕೇವಲ ಉಪಗ್ರಹ ಆಧಾರಿತ ಸಮೀಕ್ಷೆಗೆ ಸೀಮಿತವಾಗದೆ ಮಾನವ ಸಂಪನ್ಮೂಲವನ್ನು ಬಳಸಿಕೊಂಡು ಭೌತಿಕ ಸಮೀಕ್ಷೆ ನಡೆಸಲಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಸಮೀಕ್ಷೆ ನಡೆಸಬೇಕು ಎಂದರು.

ಮಲೆನಾಡಿನ ಪ್ರತಿಯೊಂದು ಪ್ರದೇಶದ ವಾಸ್ತವ ಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಬೇಕು. ರೈತರ ಕೃಷಿ ಜಮೀನು, ಜನವಸತಿ ಪ್ರದೇಶ, ಅರಣ್ಯ ಭೂಮಿ ಹಾಗೂ ಇತರೆ ಭೂ ಬಳಕೆಯ ಸ್ವರೂಪವನ್ನು ಗುರುತಿಸಿ ದಾಖಲಿಸಬೇಕು. ಈ ಸಂದರ್ಭದಲ್ಲಿ ನೈಸರ್ಗಿಕ ಭೂದೃಶ್ಯ ಮತ್ತು ಸಾಂಸ್ಕೃತಿಕ ಭೂದೃಶ್ಯವನ್ನು ಪ್ರತ್ಯೇಕವಾಗಿ ಗುರುತಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

Also read>> ತಿರುಮಲ ಬ್ರಹ್ಮೋತ್ಸವಕ್ಕೆ ಭರದ ಸಿದ್ಧತೆ: ಫಲ-ಪುಷ್ಪ ಪ್ರದರ್ಶನ, ಮಾಧ್ಯಮ ಕೇಂದ್ರ ಉದ್ಘಾಟನೆ

ಭೌತಿಕ ಸಮೀಕ್ಷೆಯ ಮೂಲಕ ವಾಸ್ತವಾಂಶಗಳನ್ನು ಸಂಗ್ರಹಿಸಿದ ನಂತರವೇ ಪರಿಸರ ಸೂಕ್ಷö್ಮ ಪ್ರದೇಶದ ಗಡಿ ನಿರ್ಧರಿಸುವುದು ಸೂಕ್ತ. ಇದರಿಂದ ಜನವಸತಿ ಮತ್ತು ಕೃಷಿ ಪ್ರದೇಶಗಳಿಗೆ ಅನಗತ್ಯ ತೊಂದರೆ ಉಂಟಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.
ಸಂಸತ್’ನಲ್ಲೂ ವಿಷಯ ಪ್ರಸ್ತಾಪ

ಕಸ್ತೂರಿರಂಗನ್ ವರದಿ ಕುರಿತು ತಾನು ಸಂಸತ್’ನಲ್ಲಿ ಕನಿಷ್ಠ ಎರಡು ಬಾರಿ ಪ್ರಸ್ತಾಪಿಸಿದ್ದೇನೆ ಎಂದು ರಾಘವೇಂದ್ರ ತಿಳಿಸಿದರು.
ಪ್ರಸ್ತುತ ಕಸ್ತೂರಿರಂಗನ್ ವರದಿ ವಿಚಾರವು ಏಳನೇ ಕರಡು ಅಧಿಸೂಚನೆಯ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ಸ್ಪಷ್ಟವಾಗಿ ಸಲ್ಲಿಸಬೇಕು ಎಂದು ಅವರು ಹೇಳಿದರು.

ಮಲೆನಾಡಿನ ರೈತರು ಹಾಗೂ ಜನವಸತಿ ಪ್ರದೇಶಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ತನ್ನ ನಿಲುವನ್ನು ರೂಪಿಸಬೇಕು. ಅಗತ್ಯವಿದ್ದರೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಕಾಲಾವಕಾಶ ಪಡೆದು ಸಮಗ್ರ ಭೌತಿಕ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

Shivamogga : ಜನವಸತಿ ಪ್ರದೇಶಗಳಿಗೆ ತೊಂದರೆಯಾಗದಂತೆ ಕ್ರಮ

ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಕಸ್ತೂರಿರಂಗನ್ ವರದಿ ಕುರಿತು ರಾಜ್ಯದ ನಿಲುವನ್ನು ಸ್ಪಷ್ಟವಾಗಿ ತಿಳಿಸಲಾಗಿತ್ತು ಎಂದು ರಾಘವೇಂದ್ರ ಹೇಳಿದರು.

ಈಗಲೂ ಜನವಸತಿ ಪ್ರದೇಶಗಳಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದು ತಮ್ಮ ಪಕ್ಷದ ನಿಲುವಾಗಿದೆ ಎಂದು ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸೇರಿದಂತೆ ವಿವಿಧ ಪ್ರದೇಶಗಳ ಕುರಿತು ಜನರಲ್ಲಿ ಅನಗತ್ಯ ಆತಂಕ ಮೂಡಿಸುವ ರೀತಿಯಲ್ಲಿ ಹೇಳಿಕೆ ನೀಡಬಾರದು. ವಾಸ್ತವ ಪರಿಸ್ಥಿತಿಯನ್ನು ಜನರಿಗೆ ಸ್ಪಷ್ಟವಾಗಿ ತಿಳಿಸುವುದು ಮುಖ್ಯ ಎಂದು ಹೇಳಿದರು.

ಶರಾವತಿ ಮುಳುಗಡೆ ಸಂತ್ರಸ್ತರ ವಿಚಾರ ಪ್ರಸ್ತಾಪ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನೂ ಇದೇ ಸಂದರ್ಭದಲ್ಲಿ ಬಿ.ವೈ. ರಾಘವೇಂದ್ರ ಪ್ರಸ್ತಾಪಿಸಿದರು.

ಹಲವು ವರ್ಷಗಳಿಂದ ಪುನರ್ವಸತಿ ಹಾಗೂ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರಿಗೆ ಮತ್ತಷ್ಟು ಸಂಕಷ್ಟ ಎದುರಾಗಬಾರದು. ಕಸ್ತೂರಿರಂಗನ್ ವರದಿ ಅನುಷ್ಠಾನದ ಪರಿಣಾಮವಾಗಿ ಜನರು ನಿರ್ವಸಿತರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಅವರು ಹೇಳಿದರು.

ಮಲೆನಾಡಿನ ಜನರ ಜೀವನೋಪಾಯ, ಕೃಷಿ ಮತ್ತು ಜನವಸತಿ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸೆ.25ರೊಳಗೆ ರಾಜ್ಯದ ನಿಲುವು ಸ್ಪಷ್ಟಪಡಿಸಲಿ

ಕೇಂದ್ರ ಸರ್ಕಾರಕ್ಕೆ ರಾಜ್ಯದ ಅಭಿಪ್ರಾಯ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸೆ.25ರ ಗಡುವಿನೊಳಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ರಾಘವೇಂದ್ರ ಹೇಳಿದರು.

ಅದೇ ವೇಳೆ ಮಲೆನಾಡು ಭಾಗದಲ್ಲಿ ಅಗತ್ಯವಿರುವ ಭೌತಿಕ ಸಮೀಕ್ಷೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸಮಯವನ್ನು ಕೇಳಬೇಕು. ಸಮೀಕ್ಷೆ ನಡೆಸದೆ ಕೇವಲ ದಾಖಲೆಗಳು ಅಥವಾ ಉಪಗ್ರಹ ಆಧಾರಿತ ಮಾಹಿತಿಯ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಬಾರದು ಎಂದು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kasturirangan reportMP B Y RagahvendraPhysical Surveyಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತಿರುಮಲ ಬ್ರಹ್ಮೋತ್ಸವಕ್ಕೆ ಭರದ ಸಿದ್ಧತೆ: ಫಲ-ಪುಷ್ಪ ಪ್ರದರ್ಶನ, ಮಾಧ್ಯಮ ಕೇಂದ್ರ ಉದ್ಘಾಟನೆ

Next Post

ದಸರಾ, ದೀಪಾವಳಿ, ಛತ್ ಹಬ್ಬ: ಬೆಂಗಳೂರು, ಹುಬ್ಬಳ್ಳಿ  ಸೇರಿ 8 ವಿಶೇಷ ರೈಲುಗಳ ಅವಧಿ ವಿಸ್ತರಣೆ

kalpa News

kalpa News

Next Post
Indian Railway Special trains bengaluru hubballi

ದಸರಾ, ದೀಪಾವಳಿ, ಛತ್ ಹಬ್ಬ: ಬೆಂಗಳೂರು, ಹುಬ್ಬಳ್ಳಿ  ಸೇರಿ 8 ವಿಶೇಷ ರೈಲುಗಳ ಅವಧಿ ವಿಸ್ತರಣೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL