ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತೆತ್ತ ಯೋಧರು ಮತ್ತು ಭಾರತದ ಪರಂಪರೆಯನ್ನು ಉಳಿಸಿ ಬೆಳೆಸಿ ಮುನ್ನಡೆಸಿದೆ ರಾಜಮಹಾರಾಜರ ಬಗ್ಗೆ ಮತ್ತು ದೇಶದ ಸಂಸ್ಕಾರ-ಸಂಸ್ಕೃತಿಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವ ಸಲುವಾಗಿ ಕೇಂದ್ರ ಸರ್ಕಾರ ತಾಲೂಕು ಮಟ್ಟದ ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ ಹಮ್ಮಿಕೊಂಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ನಮ್ಮ ಜಿಲ್ಲೆಯ ಶಿಕಾರಿಪುರದ ಈಸೂರು ಗ್ರಾಮ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾಗಿ ದೇಶದ ಗಮನ ಸೆಳೆದಿತ್ತು. ಕೆಳದಿ ಶಿವಪ್ಪ ನಾಯಕರು ಕೂಡ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಡೀ ದೇಶದಲ್ಲಿ ಲಕ್ಷಾಂತರ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಪೂರೈಸಿದ ಆಜಾದಿ ಕಾ ಅಮೃತ ಮಹೋತ್ಸವ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಯುವಶಕ್ತಿಗೆ ಅರಿವು ಮೂಡಿಸುವ ಕೆಲಸವನ್ನು ದೇಶದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಈ ಯೋಜನೆ ಮಾಡಿದೆ. ದೆಹಲಿಯಲ್ಲಿ ಕೂಡ ಪ್ರಮುಖ ರಸ್ತೆಯಲ್ಲಿ ಕರ್ತವ್ಯ ಪಥ ಎಂದು ಘೋಷಣೆ ಮಾಡಿ ದೇಶದ 8 ಲಕ್ಷ ಗ್ರಾಮಗಳಿಂದ ಸಸಿ ಮತ್ತು ಮಣ್ಣು ತಂದು ಅಲ್ಲಿ ಸಸಿ ನೆಡುವ ಪುಣ್ಯದ ಕಾರ್ಯ ಮಾಡಲಾಗುತ್ತಿದೆ. ಇದರಲ್ಲಿ ಭಾಗವಹಿಸಿದ ಒಂದು ಅವಕಾಶ ನಿಮಗೂ ಸಲ್ಲತ್ತೆ ಎಂದರು.
ಕ್ಷಮಿಸುವ ಗುಣ ಮಾತ್ರಭೂಮಿಗೆ ಮಾತ್ರ ಸಾಧ್ಯ. ಈ ದೇಶದ ಮಣ್ಣಿನ ಗುಣವೇ ಅಂತದ್ದು, ಮಾತೃಭೂಮಿಯ ಋಣ ತೀರಿಸಲಾಗುವುದಿಲ್ಲ ಎಂದರು.
Also read: ದಸರಾ ಉತ್ಸವ: ಅಂಬಾ ಶಪಥ ಯಕ್ಷಗಾನ ಪ್ರದರ್ಶನ
ಈ ಸಂದರ್ಭದಲ್ಲಿ ನಮ್ಮ ದೇಶದ ಸಂವಿಧಾನ ಮತ್ತು ಕಾನೂನು ಪಾಲಿಸುತ್ತೇವೆ. ದೇಶಕ್ಕೆ ಅಪಮಾನ ಆಗುವ ರೀತಿಯಲ್ಲಿ ನಡೆದುಕೊಳ್ಳುವುದಿಲ್ಲ. ದೇಶಕ್ಕೆ ಗೌರವ ತರುತ್ತೇವೆ ಎಂಬ ಪ್ರಮಾಣ ವಚನ ಸ್ವೀಕರಿಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಅಮೃತ ಕಳಶ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿ.ಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ನೆಹರು ಯುವ ಕೇಂದ್ರದ ಅಧಿಕಾರಿ ಉಲ್ಲಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶಿವಮೊಗ್ಗ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ್ ಸ್ಕೌಟ್ಸ್ –ಗೈಡ್ಸ್, ಭಾರತೀಯ ಅಂಚೆ ಇಲಾಖೆ ಹಾಗೂ ವಿವಿಧ ಸಂಘಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.


















