No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಎಂ ಕಿಸಾನ್, ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ: ಸಂಸದ ರಾಘವೇಂದ್ರ

kalpa News by kalpa News
November 15, 2025
in ಶಿವಮೊಗ್ಗ
0
ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರದಿಂದ ರೈತರಿಗೆ ವಿಶೇಷವಾಗಿ ಶಕ್ತಿತುಂಬುವ ಕಾರ್ಯ ಆಗಿದ್ದು, ಪಿಎಂ ಕಿಸಾನ್, #PM Kisan ಫಸಲ್ ಭೀಮಾ ಯೋಜನೆಯ #Fasal Bhima Scheme ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಿಎಂ ಕಿಸಾನ್ ಯೋಜನೆಯಡಿ 1,64,913 ರೈತರಿಗೆ 20 ಕಂತುಗಳಲ್ಲಿ 540 ಕೋಟಿ ರೂ. ಜಮಾ ಆಗಿದೆ. ಫಸಲ್ ಭೀಮಾ ಯೋಜನೆಯಡಿ ಕೃಷಿಬೆಳೆಗೆ 1,93,570 ರೈತರಿಗೆ 235 ಕೋಟಿ ರೂ. ಹಣ ಜಮಾ ಆಗಿದೆ. ತೋಟಗಾರಿಕಾ ಮತ್ತು ಹವಾಮಾನ ಆಧರಿತ ಬೆಳೆಗಳಿಗೆ ಬೆಳೆವಿಮೆ ಯೋಜನೆಯಲ್ಲಿ 2,49,837 ರೈತರಿಗೆ 620 ಕೋಟಿ ಜಮಾ ಆಗಿದೆ ಎಂದರು.
ಅತಿವೃಷ್ಟಿ ಹಣ ಮತ್ತು ಬೆಳೆವಿಮೆ ಹಣ ಬಂದಿಲ್ಲ ಎಂದು ಕೆಲವು ರೈತರು ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಿದ್ದರು. ಕೇಂದ್ರದ ಎನ್‍ಡಿಆರ್‍ನಿಂದ ಶೇ.75 ರಿಂದ 90ರಷ್ಟು ಹಾಗೂ ರಾಜ್ಯದ ಎಸ್‍ಜಿಆರ್‍ನಿಂದ ಶೇಕಡ 10 ರಿಂದ 20 ಅತಿವೃಷ್ಟಿ ಪರಿಹಾರ ಜಮಾ ಆಗಬೇಕಿದ್ದು ಒಂದು ವಾರದೊಳಗೆ ಜಮಾ ಆಗಲಿದೆ ಎಂದರು.

ಜಿಲ್ಲೆಯ 9366 ರೈತರಿಗೆ 5,58,46,000 ರೂ. ಜಮಾ ಆಗಿದ್ದು, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಭತ್ತ ಇನ್ನಿತರ ಕೃಷಿ ಬೆಳೆಗೆ 2023-2024ನೇ ಸಾಲಿನ ಬೆಳೆನಷ್ಟ ಪರಿಹಾರ, 13.5 ಕೋಟಿ ಈಗಾಗಲೇ ಮೂರು ತಿಂಗಳ ಕೆಳಗೆ ಜಮಾ ಆಗಿದೆ. ಈ ತಿಂಗಳ ಅಂತ್ಯದ ವೇಳೆಗೆ 2024-25ನೇ ಸಾಲಿನ ಹವಾಮಾನಾಧಾರಿತ ಬೆಳೆನಷ್ಟ 80 ರಿಂದ 95 ಸಾವಿರ ರೈತರಿಗೆ 180 ಕೋಟಿಯವರೆಗೆ ಪರಿಹಾರ ಬರುವ ನಿರೀಕ್ಷೆಯಿದ್ದು, ಈವರ್ಷ 60 ಸಾವಿರ ರೈತರಿಗೆ 1 ಲಕ್ಷ ಎಕರೆಗೆ ಅಡಿಕೆ ಬೆಳೆಹಾನಿ ಪರಿಹಾರ ಸಿಗಲಿದೆ. ಅಲ್ಲದೆ 3ಸಾವಿರ ಎಕರೆಯಲ್ಲಿ ಬೆಳೆದ ಶುಂಠಿ, ಮಾವು ಪರಿಹಾರ ಕೂಡ ರೈತರ ಖಾತೆಗೆ ಜಮಾ ಆಗಲಿದೆ ಎಂದರು.
ಈಗಾಗಲೇ ಮೆಕ್ಕೆಜೋಳ ಬೆಳೆ ಬಂದಿದ್ದು, ಮಾರುಕಟ್ಟೆಯಲ್ಲಿ ಕ್ವಿಂಟಾಲ್‍ಗೆ 1800 ದರ ಇದ್ದು ಕೇಂದ್ರ ಸರ್ಕಾರ ಕನಿಷ್ಟ ಬೆಂಬಲ ಬೆಲೆಯನ್ನು ಜೂನ್ ಮೊದಲ ವಾರದಲ್ಲೇ ಘೋಷಣೆ ಮಾಡಿದೆ. ಕಳೆದಬಾರಿ 2400 ಬೆಂಬಲ ಬೆಲೆ ಮೆಕ್ಕೆಜೋಳಕ್ಕೆ ಘೋಷಣೆಯಾಗಿತ್ತು. ಆದರೂ ರಾಜ್ಯ ಸರ್ಕಾರ ಈಬಾರಿ ಇನ್ನೂ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಮಾಡಿಲ್ಲ. ಆದಷ್ಟು ಬೇಗ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ಜಿಲ್ಲೆಯ ಸೊರಬ, ಶಿಕಾರಿಪುರ, ಶಿವಮೊಗ್ಗ ಗ್ರಾಮಾಂತರದಲ್ಲಿ ಆದಷ್ಟುಬೇಗ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಮುಸುಕಿನಜೋಳ ಖರೀದಿ ಕೇಂದ್ರ ತೆರೆಯಲಿಲ್ಲ. ಭತ್ತದ ಖರೀದಿ ಕೇಂದ್ರ ತೆರೆದಿದ್ದು 1 ಚೀಲದಲ್ಲಿ 50 ಕೆ.ಜಿ. ಮಾತ್ರ ಇರಬೇಕೆಂಬ ಷರತ್ತು ಹಾಕಿದ್ದಾರೆ. ಖಾಲಿ ಚೀಲಕ್ಕೆ ಕೇವಲ 3 ರೂ. ನೀಡುತ್ತಿದ್ದು, ಚೀಲದ ಬೆಲೆ 30 ರೂ. ಇದ್ದು, ಅದರಲ್ಲೂ ರೈತರಿಗೆ ನಷ್ಟವಾಗುತ್ತಿದೆ. ಖಾಲಿ ಚೀಲಕ್ಕೆ ಬೆಲೆ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು.

ರೈತರ ಖಾತೆಗೆ ನೇರವಾಗಿ ಪರಿಹಾರದ ಹಣ ಮತ್ತು ಬೆಳೆವಿಮೆ ಹಣ ಜಮಾ ಆಗಲಿದೆ ಎಂದ ಅವರು, ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ಮತ್ತು ನಿನ್ನೆ ನಡೆದ ದುರ್ಘಟನೆಗೆ ಸರ್ಕಾರವೇ ಹೊಣೆ ಹೋರಬೇಕಾಗಿದೆ. ಬೇರೆ ರಾಜ್ಯಗಳಲ್ಲಿ ಇಲ್ಲದ ಕೇಂದ್ರದ ಖರೀದಿ ನಿಗಧಿತ ದರದ ಸಮಸ್ಯೆ ನಮ್ಮಲ್ಲಿ ಏಕೆ ಎಂಬುದು ತಿಳಿಯುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕಬ್ಬು ಬೆಳೆಗಾರರ ಆಕ್ರೋಶಕ್ಕೆ ಕಾರಣ ಎಂದರು.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ #Sharavathi Pumped Storage Scheme ಸಂಬಂಧಿಸಿದಂತೆ ಉತ್ತರಿಸಿದ ಅವರು, ರಾಜ್ಯ ಸರ್ಕಾರದ ಯಾವುದೇ ಪ್ರಸ್ತಾವನೆಯನ್ನು ಸ್ಥಳೀಯ ಜನರ ವಿರೋಧವಿದ್ದರೆ ಅದನ್ನು ರಾಜ್ಯ ಸರ್ಕಾರವೇ ಪರಿಗಣಿಸಬೇಕು. ಕೇಂದ್ರ ಸರ್ಕಾರ ನಿಯಮಾನುಸಾರವೇ ಅನುಮತಿ ನೀಡುತ್ತದೆ. ಪಂಪ್ಡ್ ಸ್ಟೋರೇಜ್ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಈಗಾಗಲೇ ಕೇಂದ್ರ ಸರ್ಕಾರ ಮರುಪರಿಶೀಲನೆಗೆ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದು, ಯೋಜನೆಯ ಪ್ರಸ್ತಾವವನ್ನು ತಡೆನೀಡಲಾಗಿದೆ ಇದರ ಪರಿಣಾಮವನ್ನು ಈಗಾಗಲೇ ಗಮನಕ್ಕೆ ತರಲಾಗಿದೆ ಎಂದರು.

ಸಾಗರದಲ್ಲಿ ಹೈವೆಗೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಆಗಿ 2ವರ್ಷ ಆಗಿದೆ. ಭೂಸ್ವಾಧೀನ ಪ್ರಕ್ರಿಯೆ ನಿಧಾನವಾಗುತ್ತಿದೆ. ಕೊಡಚಾದ್ರಿ ಮತ್ತು ಕೊಲ್ಲೂರು ನಡುವಿನ ಕೇಬಲ್ ಕಾರ್ ಯೋಜನೆಗೆ ಕೂಡ ಭೂಸ್ವಾಧೀನ ಪ್ರಕ್ರಿಯೆಯಿಂದ ಸ್ವಲ್ಪ ವಿಳಂಬವಾಗಿದೆ. ಹೆದ್ದಾರಿಗೆ ಸಂಬಂಧಿಸಿದಂತೆ ಎರಡು ಸೇತುವೆಗಳಿಗೂ ಕೂಡ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬವಾಗಿದ್ದರಿಂದ ಯೋಜನೆ ಕುಂಟುತ್ತಾ ಸಾಗಿದ್ದು, ಈ ಸಂಬಂಧ ಈಗಾಗಲೇ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಫೆಬ್ರವರಿ ಅಂತ್ಯದವೇಳೆಗೆ ಎಲ್ಲವೂ ಬಗೆಹರಿಯಲಿದೆ ಎಂದರು.
ಕೋಟೆಗಂಗೂರು ರೈಲ್ವೆಕೋಚ್ ಫ್ಯಾಕ್ಟರಿ ಕಾಮಗಾರಿ ಶೇ.60ರಷ್ಟು ಪೂರ್ಣವಾಗಿದ್ದು, 2 ಟ್ರ್ಯಾಕ್‍ಗಳ ಕಾರ್ಯ ಮುಗಿದಿದೆ. ಇನ್ನೂ ನಾಲ್ಕು ಟ್ರ್ಯಾಕ್ ಅಳವಡಿಸಲು ಬಾಕಿಯಿದ್ದು, ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿದೇವಿ ಮಲ್ಲಪ್ಪ, ಪ್ರಮುಖರಾದ ಶಿವರಾಜ್, ಮಾಲತೇಶ್, ಸಿದ್ಲಿಂಗಪ್ಪ, ಕುಮಾರನಾಯ್ಕ, ಗಣೇಶ್ ಬಿಳಿಕಿ, ಬಳ್ಳೆಕೆರೆ ಸಂತೋಷ್, ರಾಜೇಶ್ ಕಾಮತ್, ಅಣ್ಣಪ್ಪ, ಚಂದ್ರಶೇಖರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Fasal Bhima SchemeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaPM KisanSharavathi Pumped Storage SchemeShimogaShivamoggaNewsಪಿಎಂ ಕಿಸಾನ್ಫಸಲ್ ಭೀಮಾ ಯೋಜನೆಮಲೆನಾಡು_ಸುದ್ಧಿಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರಣಿ ಅಪಘಾತ | ಮೂವರು ಸ್ಥಳದಲ್ಲೇ ಸಾವು

Next Post

ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿ ‘ಮಕ್ಕಳ ಹಬ್ಬ’

kalpa News

kalpa News

Next Post
ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿ ‘ಮಕ್ಕಳ ಹಬ್ಬ’

ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿ 'ಮಕ್ಕಳ ಹಬ್ಬ'

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL