No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಆನ್ ಲೈನ್ ಸಂವಾದ

ಏಕಕಾಲದಲ್ಲಿ ನಡೆದ ಸಂವಾದ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ: ಬಿ. ವೈ. ವಿಜಯೇಂದ್ರ

kalpa News by kalpa News
April 27, 2023
in ಶಿವಮೊಗ್ಗ
0
ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಆನ್ ಲೈನ್ ಸಂವಾದ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ PM Narendra Modi ಪಾಲ್ಗೊಂಡು ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು.

ಶಿವಮೊಗ್ಗದ ಹೊನ್ನಳ್ಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಹಳ್ಳಿಯ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆನ್ಲೈನ್ ಮೂಲಕ ಆಯೋಜಿಸಿದ್ದ ಕಾರ್ಯಕ್ರಮವನ್ನು ಗ್ರಾಮದ ಹಲವರು  ವೀಕ್ಷಿಸಿದರು.

ಬಿಜೆಪಿ ಕಾರ್ಯಕರ್ತ ವಿರೂಪಾಕ್ಷಪ್ಪ ಎಂಬುವರು ಕೇಳಿದ ಪ್ರಶ್ನೆ ಒಂದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಶಿವಮೊಗ್ಗ ಸವಾಲಿನ ಕ್ಷೇತ್ರವಾಗಿದೆ. ಇಂತಹ ಸಂದರ್ಭದಲ್ಲಿ ಬೂತ್ ಮಟ್ಟದಲ್ಲಿ ಹೇಗೆ ಕಾರ್ಯ ನಿರ್ವಹಿಸಬೇಕು? ಸರ್ಕಾರದ ಸಾಧನೆಗಳನ್ನು ಜನರಿಗೆ ಹೇಗೆ ತಲುಪಿಸಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಉತ್ತರ ನೀಡಿದರು.

ಸರ್ಕಾರದ ಸಾಧನೆಗಳನ್ನು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಬೇಕಿದೆ. ಕೇವಲ ಮನೆ ಹೊರಗೆ ನಿಂತು ಪಾಂಪ್ಲೆಟ್ ಕೊಟ್ಟು ಬರಬೇಡಿ. ನೀವು ಏನು ಹೇಳಲು ಹೊರಟ್ಟಿದ್ದೀರಾ ಅದು ನಿಮ್ಮ ಮೊಬೈಲ್, ಡೈರಿಯಲ್ಲಿ ಬರೆದಿಟ್ಟುಕೊಂಡಿರಬೇಕು. ನಿಮ್ಮ ತಲೆಯಲ್ಲಿ, ಹೃದಯದಲ್ಲಿ ಇರಬೇಕು.‌ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯವರೊಂದಿಗೆ ವಿನಯವಾಗಿ ನಡೆದುಕೊಳ್ಳಬೇಕು. ಮನೆಯ ಹಿರಿಯ ಸದಸ್ಯರಿಗೆ ನಮಸ್ಕಾರ ಮಾಡಬೇಕು. ಸಣ್ಣ ಸಣ್ಣ ಮಕ್ಕಳಿಗೆ ಪ್ರೀತಿ ತೋರಿಸಬೇಕು. ಆ ನಂತರ ಬಿಜೆಪಿ ಸರ್ಕಾರದ ಯೋಜನೆಯನ್ನು, ಸಾಧನೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಬಿಜೆಪಿ ಸರ್ಕಾರದ ಸಾಧನೆ, ಯೋಜನೆಯನ್ನು ಮತದಾರರಿಗೆ ತಿಳಿಸಿ ಹೇಳಬೇಕು ಎಂದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಇಂಜಿನ್ ಸರ್ಕಾರ ರಾಜ್ಯ, ದೇಶದ ಅಭಿವೃದ್ಧಿ ಮಾಡುತ್ತಿದೆ. ಈ ಬಗ್ಗೆ ಜನರಿಗೆ ತಿಳಿಸಿ. ಅಭಿವೃದ್ಧಿ ಮಂತ್ರ ಜಪಿಸುತ್ತಿರುವುದು ಜನರಿಗೆ ತಿಳಿಸಿಕೊಡಿ.‌ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸುತ್ತಿರುವ ಬಗ್ಗೆ ಮತದಾರರಿಗೆ ತಲುಪಬೇಕು. ಇವೆಲ್ಲವನ್ನೂ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಡಬ್ಬಲ್ ಇಂಜಿನ್ ಸರ್ಕಾರ ಏನು ಮಾಡುತ್ತಿದೆ ಎಂಬುದು ತಿಳಿಸುವ ಅಗತ್ಯವಿದೆ. ಕೇವಲ ರಾಜಕೀಯ ಮಾಡದೇ, ಅಭಿವೃದ್ಧಿ ನಮ್ಮ ಪಣವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆ ಮಾಡಲಾಗಿದೆ. ಭ್ರಷ್ಟಾಚಾರದ ಬಗ್ಗೆ ಡಬ್ಬಲ್ ಇಂಜಿನ್ ಸರ್ಕಾರ ಪ್ರಹಾರ ಮಾಡಿದೆ. ಕಪ್ಪುಹಣ ವರ್ಗಾವಣೆ ಬಗ್ಗೆ ನಿಗಾ ಇಟ್ಟಿದೆ. ಕೆಲವರ ಜೇಬು ಸೇರುತ್ತಿದ್ದ ಹಣ ಈಗ ಸರ್ಕಾರದ ಖಜಾನೆ ಸೇರುತ್ತಿದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಡಬ್ಬಲ್ ಇಂಜಿನ್ ಸರ್ಕಾರ ಸಮರ ಸಾರಿದೆ. ರಾಜ್ಯವನ್ನು ಭ್ರಷ್ಟಮುಕ್ತವಾಗಿಸಲು ನಮ್ಮ ಸರ್ಕಾರ ಮುಂದಾಗಿದೆ. ಸಾಮಾಜಿಕವಾಗಿ ಜಾಗೃತಗೊಳಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕದ ಜನರು, ಭಕ್ತಿ, ಯುಕ್ತಿ ಮೂಲಕ ರಾಜ್ಯದ ಅಭಿವೃದ್ಧಿಗೆ ಕೈ ಜೋಡಿಸುತ್ತಿದ್ದಾರೆ. ರಾಜ್ಯದ ಜನರು ಸಾಹಿತ್ಯವನ್ನು ತಮ್ಮ ಉಸಿರನ್ನಾಗಿಸಿಕೊಂಡಿದ್ದಾರೆ ಎಂದು ರಾಷ್ಟ್ರಕವಿ ಕುವೆಂಪು ಅವರ ಹೆಸರು ಪ್ರಸ್ತಾಪಿಸಿದರು.

ಕರ್ನಾಟಕದ ಜೊತೆಗೆ ನನ್ನ ಅವಿನಾಭಾವ ಸಂಬಂಧವಿದೆ.‌ಕರ್ನಾಟಕದ ವಿಕಾಸಕ್ಕಾಗಿ ಹಲವಾರು ಜನರು ದುಡಿಯುತ್ತಿದ್ದಾರೆ. ಇವೆಲ್ಲವನ್ನೂ ನಾನು ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದೇನೆ. ಕೆಲವೇ ದಿನಗಳಲ್ಲಿ ಮನ್ ಕಿ ಬಾತ್ ನೂರು ಕಾರ್ಯಕ್ರಮವಾಗಿಸುವ ಕಾರ್ಯಕ್ರಮವಾಗಲಿದೆ. ಇವೆಲ್ಲವೂ ನಿಮ್ಮಿಂದ ಸಾಧ್ಯವಾಗಿದೆ ಎಂದರು.

Kalahamsa Infotech private limited
ಸಂಸ್ಕೃತಿ, ಧಾರ್ಮಿಕತೆ ಆಧುನಿಕ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಇತಿಹಾಸದ ಜೊತೆಗೆ ವರ್ತಾಮಾನದ ಬಗ್ಗೆಯೂ ಯೋಚಿಸಬೇಕಿದೆ.‌ ಇಂದು ಒಂದು ಉತ್ತಮ ಸರ್ಕಾರದ ಕಾರ್ಯವೈಖರಿಯಾಗಿದೆ.‌ ಬಿಜೆಪಿ ಶಾರ್ಟ್ ಕಟ್ ಪಕ್ಷವಲ್ಲ. ದೇಶಕ್ಕಾಗಿ ದುಡಿದಿರುವ, ದುಡಿಯುವ ಪಕ್ಷವಾಗಿದೆ. ಬಿಜೆಪಿ ಸರ್ಕಾರ ಹಲವು ಆಯಾಮಗಳಲ್ಲಿ, ಯೋಚಿಸಿ, ಯೋಜಿಸಿ ಕಾರ್ಯಸಾಧುವಾಗಿಸುತ್ತದೆ ಎಂದರು.

ಗ್ರಾಮಸ್ಥರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು

ಏಕಕಾಲದಲ್ಲಿ ನಡೆದ ಸಂವಾದ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ: ಬಿ. ವೈ. ವಿಜಯೇಂದ್ರ
ಚುನಾವಣಾ ಪ್ರವಾಸದ ಮಾರ್ಗಮಧ್ಯೆ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಸಂವಾದದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ .ವಿಜಯೇಂದ್ರ ಭಾಗವಹಿಸಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ 50 ಲಕ್ಷ ಕಾರ್ಯಕರ್ತರೊಂದಿಗೆ ಏಕಕಾಲದಲ್ಲಿ ನಡೆದ ಸಂವಾದವು ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸ ಹೆಚ್ಚಿಸಿದೆ. ಕಾರ್ಯಕರ್ತರ ಪಾಲಿಗೆ ಪ್ರೇರಣಾಶಕ್ತಿಯಾಗಿರುವ ಪ್ರಧಾನಿಗಳು ನಮ್ಮ ಡಬಲ್ ಇಂಜಿನ್ ಸರ್ಕಾರದ ಐತಿಹಾಸಿಕ ನಿರ್ಣಯಗಳು, ಜನಪರ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ವಿರೋಧಿ ರಾಜಕಾರಣವನ್ನು ಜನರ ಮುಂದಿಟ್ಟು ಪಕ್ಷದ ಪರ ಮತ ಯಾಚಿಸುವಂತೆ ಅತ್ಯಮೂಲ್ಯವಾದ ಸಲಹೆ ನೀಡಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaPM Narendra ModiShimogaShivamoggaNewsಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಿಫ್ಟ್’ಗೆ ಸಿಲುಕಿ ಬೆಂಗಳೂರಿನಲ್ಲಿ ಯುವಕ ದುರ್ಮರಣ

Next Post

ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ

kalpa News

kalpa News

Next Post
ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ

ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL