ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲ್ಲೂಕಿನ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಕಾಡುಪ್ರಾಣಿಗಳ ಕಳ್ಳ ಬೇಟೆ ಪ್ರಕರಣ, ಅಲ್ಲದೇ ಈ ಭಾಗದಲ್ಲಿ ನಡೆದ ಅರಣ್ಯ ಒತ್ತುವರಿ ಕುರಿತಂತೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯಾಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ.
ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಕಾಡು ಪ್ರಾಣಿಗಳ ಕಳ್ಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಗಮನಕ್ಕೆ ಬಂದ ದೂರುಗಳಿಗೆ ಪ್ರತಿಕ್ರಿಯಿಸಿರುವ ಅವರು ಈ ಕುರಿತಂತೆ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ನಡುವೆ ಲಕ್ಕಿನ ಕೊಪ್ಪ ಅರಣ್ಯ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಅರಣ್ಯ ಭೂಮಿ ಒತ್ತುವರಿ ಕುರಿತು ಶಿವಮೊಗ್ಗ ರುತ್ತ ಅರಣ್ಯ ಸಂರಕ್ಷಣಾಧಿಕಾರಿ ಕೆ. ಹನುಮಂತಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಒತ್ತುವರಿ ಪ್ರಕರಣಗಳ ಸಂಖ್ಯೆ ಹಿಂದಿಗಿಂತಲೂ ಈಗ ಹೆಚ್ಚಾಗಿದೆ. ನಾವು ಮೂರು ವಿಭಾಗದಲ್ಲಿ ಒತ್ತುವರಿಗಳನ್ನು ಗುರುತಿಸುತ್ತಿದ್ದೇವೆ. 30 ಎಕರೆ ಮೇಲ್ಪಟ್ಟು 10 ರಿಂದ 30 ಎಕರೆ ಹಾಗೂ 10 ಎಕರೆ ವರೆಗಿನ ಒತ್ತೂವರೆ ಗುರುತಿಸಿ ನೋಟಿಸ್ ನೀಡಿ ದಾಖಲಾತಿಗಳ ಪರಿಶೀಲನೆ ನಡೆಸಿ ನಂತರ ಒತ್ತುವರಿ ತೆರವುಗೊಳಿಸಲಾಗುವುದು ಅದಕ್ಕೂ ಮೊದಲು ಪ್ರಕರಣದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಿ ವಿಷಯ ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post