ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ನವರು ಅರ್ಥಹೀನ ರಾಜಕಾರಣ ಮಾಡುತ್ತಿದ್ದು, ಅಸಹ್ಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಆರೋಪಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಪಾಲರ ಹುದ್ದೆಗೆ ತನ್ನದೇ ಆದ ಘನತೆ ಇದೆ. ರಾಜ್ಯಪಾಲರನ್ನು ಅವಮಾನ ಮಾಡುವುದು ಎಷ್ಟರಮಟ್ಟಿಗೆ ಸರಿ. ಸಿದ್ಧರಾಮಯ್ಯ ಅವರಿಗೆ ತನಿಖೆಗೆ ಆದೇಶ ನೀಡಿದ್ದಾರೆ ಎಂಬ ವಿಷಯವನ್ನು ಇಟ್ಟುಕೊಂಡು ರಾಜಭವನ ಚಲೋ ಮಾಡುವುದು ಎಷ್ಟರಮಟ್ಟಿಗೆ ಸರಿ? ಅಲ್ಲದೇ ರಾಜ್ಯಪಾಲರ ಭಾವಚಿತ್ರವನ್ನು ಸುಟ್ಟು ಹಾಕುವುದು ಅವಹೇಳನಕಾರಿಯಾಗಿ ಮಾತನಾಡುವುದು ಸಂವಿಧಾನ ವಿರೋಧಿಯಲ್ಲವೇ? ಇದು ಕಾಂಗ್ರೆಸ್‍ನ ಅಸಹ್ಯಕರ ಮತ್ತು ಅರ್ಥಹೀನ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

Also read: ಶಿವಮೊಗ್ಗ | ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ
ರಾಜ್ಯಪಾಲರ #Governer ಬಳಿ ಕಾಂಗ್ರೆಸ್ ನಾಯಕರು ಹೋದಾಗ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರ ಕುರಿತು ನೀವು ಒಳಗೆ ಬರುವ ಹಾಗಿಲ್ಲ ಎಂದು ಹೇಳಿರುವುದು ಸರಿಯಾಗಿಯೇ ಇದೆ. ಅವರು ರಾಷ್ಟ್ರದ್ರೋಹದ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಯಾವ ಅಂಜಿಕೆಯೂ ಇಲ್ಲವಾಗಿದೆ. ಐವಾನ್ ಡಿಸೋಜ ಅವರನ್ನು ಕೂಡಲೇ ರಾಷ್ಟ್ರದ್ರೋಹದ ಆರೋಪದ ಹಿನ್ನಲೆಯಲ್ಲಿ ಬಂಧಿಸಬೇಕು. ಅಲ್ಲದೇ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ಈ ಎಲ್ಲಾ ಘಟನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದರು.

ರಾಷ್ಟ್ರ ಭಕ್ತರ ಬಳಗವು ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹೋರಾಡ ನಡೆಸಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಡೀ ರಾಜ್ಯಾದ್ಯಂತ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು. ಹಾಗೆಯೇ ಆಶ್ರಯ ಮನೆಗಳ ವಿತರಣೆಯಾಗಬೇಕು. ಮತ್ತು ಸರ್ಕಾರ ಮಾತು ಕೊಟ್ಟಂತೆ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ. ತಕ್ಷಣವೇ ನೀಡಬೇಕೆಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗ ಶಾಸ್ತ್ರಿ, ವಿಶ್ವಾಸ್, ಶ್ರೀಕಾಂತ್, ಬಾಲು, ವಾಗೀಶ್, ಶಿವಕುಮಾರ್, ಜಾಧವ್, ಚನ್ನಬಸಪ್ಪ, ಚಿದಾನಂದ, ಮುತ್ತು ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post