ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತಾಲೂಕಿನ ಗಿಣಿಯ ಗ್ರಾಮದಲ್ಲಿ ಹಳೆಯ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಬೆರೆಸಿರುವ ಘಟನೆ ನಡೆದಿದೆ.
ಗ್ರಾಮದ ನಿವಾಸಿ ರಾಘವೇಂದ್ರ ಎಂಬುವವರ ಜಮೀನಿನ ಬಾವಿಗೆ ವಿಷ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ರಾಘವೇಂದ್ರ ಅವರು ಬಾವಿಯ ಬಳಿ ಹೋಗಿದ್ದಾಗ, ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಜಮೀನು ವಿವಾದದ ಹಿನ್ನೆಲೆ ವಿಷ ಬೆರೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















