ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಪೊಲೀಸ್ ಮಕ್ಕಳ ವಾರ್ಷಿಕ ಕ್ರೀಡಾಕೂಟಕ್ಕೆ (Police Children Annual Sports Meet) ಶಿವಮೊಗ್ಗದಲ್ಲಿ (Shivamogga) ಭಾನುವಾರ ಅದ್ಧೂರಿ ಚಾಲನೆ ನೀಡಲಾಯಿತು.
ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಐಪಿಎಸ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ
ಕ್ರೀಡೆಯಿಂದ ಮಕ್ಕಳ ದೈಹಿಕ ಸಾಮರ್ಥ್ಯ ವೃದ್ಧಿಸುವುದರ ಜತೆಗೆ ಮಾನಸಿಕ ಸದೃಢತೆಯೂ ಹೆಚ್ಚುತ್ತದೆ. ಮಕ್ಕಳು ಕೇವಲ ಓದು-ಬರಹಕ್ಕೆ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಎಸ್ಪಿ ನಿಖಿಲ್ ಕರೆ ನೀಡಿದರು.
ಮಕ್ಕಳು ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರುವಂತೆ ಪ್ರೋತ್ಸಾಹಿಸಿದರು.
Also Read>> ಶಿವಮೊಗ್ಗ | ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ರೈಲಿನಿಂದ ಜಿಗಿತ: ಸಮಯಪ್ರಜ್ಞೆ ಮೆರೆದ ಅಕ್ಕ ಪಡೆ
Shivamogga: 400ಕ್ಕೂ ಹೆಚ್ಚು ಮಕ್ಕಳ ಉತ್ಸಾಹಭರಿತ ಭಾಗಿ
ಈ ವಾರ್ಷಿಕ ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಕುಟುಂಬಗಳ 400ಕ್ಕೂ ಹೆಚ್ಚು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಮಕ್ಕಳು ತಮ್ಮ ಕ್ರೀಡಾ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಿದರು.
ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು. ಕ್ರೀಡಾಕೂಟವು ಮಕ್ಕಳಲ್ಲಿ ಉತ್ಸಾಹ ಮತ್ತು ಕ್ರೀಡಾಸಕ್ತಿಯನ್ನು ಹೆಚ್ಚಿಸುವ ವೇದಿಕೆಯಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಪ್ಪ, ಡಿವೈಎಸ್ಪಿಗಳಾದ ಶೀಲವಂತ್ ಹಾಗೂ ದಿಲೀಪ್, ಆರ್ಪಿಐ ಯುವರಾಜ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











