ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು Theft case ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ವಿನೋಬನಗರ ಹುಡ್ಕೋ ಕಾಲೋನಿಯ ಮನೆಯಲ್ಲಿ 2025ರ ಆಗಸ್ಟ್ ತಿಂಗಳಿನಲ್ಲಿ 12 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾಗಿತ್ತು. ಈ ಸಂಬಂಧ ಲಕ್ಷ್ಮೀಪುರ ಬಡಾವಣೆಯ ನಿವಾಸಿ ಉಷಾ ಅವರು ವಿನೋಬನಗರ ಠಾಣೆಯಲ್ಲಿ ದೂರು ನೀಡಿದ್ದರು.
Also read: ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಶಿವಮೊಗ್ಗ ತಾಲೂಕಿನ ರಟ್ಟೆಹಳ್ಳಿ ಗ್ರಾಮದ ನಿವಾಸಿ ಲೋಹಿತ್ ಕುಮಾರ್ (29) ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 10.7 ಗ್ರಾಂ ತೂಕದ, ಅಂದಾಜು 1.5 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ತನಿಖೆಗಾಗಿ ಪೊಲೀಸ್ ಅಧೀಕ್ಷಕ ಬಿ. ನಿಖಿಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ, ಉಪಾಧೀಕ್ಷಕ ಜಿ.ಡಿ. ಸಂಜೀವ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ವಿನೋಬನಗರ ಠಾಣೆಯ ಪೊಲೀಸ್ ನಿರೀಕ್ಷಕ ಡಿ.ಕೆ. ಸಂತೋಷಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ಈ ಯಶಸ್ವಿ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್ ಅವರು ಶ್ಲಾಘಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















