ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ದುಷ್ಕರ್ಮಿಗಳನ್ನು ದೊಡ್ಡ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಗಾಂಧಿ ಬಜಾರ್ ನ ಹತ್ತಿರ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿತರ ವಿರುದ್ದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದ ಸುರೇಶ್ ಸಿಂಗ್, ಕಮಲ್ ಸಿಂಗ್, ರಾಜಾಸ್ಥಾನದ ರಣವೀರ್ ಸಿಂಗ್ ಹಾಗೂ ರಾಮಲಾಲ್ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 1 ಪಿಸ್ತೂಲ್, 4 ಪಿಸ್ತೂಲಿನ ಗುಂಡುಗಳು, 01 ಚಾಕು, 04 ಮೊಬೈಲ್ ಫೋನ್’ಗಳು ಹಾಗೂ 01 ಸ್ಯಾಂಟ್ರೋ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಅಧರಿಸಿ ಶಿವಮೊಗ್ಗ ಡಿವೈಎಸ್’ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ, ದೊಡ್ಡ ಪೇಟೆ ಸಿಪಿಐ ವಸಂತ ಕುಮಾರ್ ನೇತೃತ್ವದ ಪಿಎಸ್’ಐ ಮಂಜಮ್ಮ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
ಆರೋಪಿಗಳ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಹೊಂಚು ಹಾಗೂ ಆಯುಧ ಕಾಯ್ದೆ ರೀತ್ಯಾ ಪ್ರಕರಣವನ್ನು ದಾಖಲಿಸಿ ಆರೋಪಿತರನ್ನು ದಸ್ತಗಿರಿ ಮಾಡಿ, ಘನ ನ್ಯಾಯಾಲಯದ ಮುಂದೆ ಹಾಜರ್ ಪಡಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















