ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರಿಗೆ ಬೆಂಕಿ ಹಚ್ಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಆರೋಪಿಯೊಬ್ಬನ ಕಾಲಿಗೆ ಗುಂಡು ಹಾರಿಸುವ ಘಟನೆ ನಡೆದಿದೆ.
ಕುಂಸಿಯ ವೀರಣ್ಣನಬೆನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಪಿಸಿ ಶಿವರಾಜ್ ಪ್ರವೀಣನನ್ನು ಹಿಡಿಯಲು ಹೋದಾಗ ಆತ ಮಾರಕಾಸ್ತçಗಳಿಂದ ದಾಳಿ ನಡೆಸಲು ಮುಂದಾದಾಗ ಪಿಎಸ್’ಐ ರಮೇಶ್ ದಾಳಿ ನಡೆಸದಂತೆ ಎಚ್ಚರಿಸಿದ್ದಾರೆ. ಇದನ್ನು ಧಿಕ್ಕರಿಸಿ ಆರೋಪಿ ದಾಳಿ ಮಾಡಲು ಯತ್ನಿಸಿದ್ದಾನೆ. ಹೀಗಾಗಿ, ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.
ದಾಳಿಯಲ್ಲಿ ಪಿಸಿ ಶಿವರಾಜು ಅವರಿಗೂ ಗಾಯಗಳಾಗಿದ್ದು, ಅವರನ್ನೂ ಹಾಗೂ ಆರೋಪಿಯನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿ. 17 ರಂದು ಜೈಲ್ ರಸ್ತೆಯ ವನಜಾಕ್ಷಿ ಎಂಬುವರಿಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ್ದನು. ಈ ಕುರಿತಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮೂರು ತಿಂಗಳ ಹಿಂದೆ ಶಿವಮೊಗ್ಗದ ಜೈಲ್ ರಸ್ತೆಯಲ್ಲಿ ವನಜಾಕ್ಷಮ್ಮ ಎಂಬುವರನ್ನ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರವೀಣ ಕೇಸ್ ವಾಪಾಸ್ ಪಡೆಯುವಂತೆ ಬೆದರಿಕೆ ಹಾಕಿದ್ದನು. ಮೂರು ತಿಂಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ.












Discussion about this post